ಗವಿರಂಗಯ್ಯ
ಭದ್ರಾವತಿ, ಸೆ. ೧೦: ಹಳೇನಗರದ ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಕಮಲ ಕುಮಾರಿಯವರ ಪತಿ ಗವಿರಂಗಯ್ಯ(೬೯) ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಕ್ಕಳನ್ನು ಹೊಂದಿದ್ದರು. ಗವಿರಂಗಯ್ಯ ಸಹಾಯಕ ಕೃಷಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಿತು.
ಇವರ ನಿಧನಕ್ಕೆ ಮಹಿಳಾ ಸೇವಾ ಸಮಾಜ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment