ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೩: ಕೊರೋನಾ ಸೋಂಕಿಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್‌ಗೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ವಿವಿಧ ದೇವಾಲಯಗಳಲ್ಲಿ ಸಂಗಮೇಶ್ವರ್ ಅಭಿಮಾನಿಗಳ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಹೊಸಮನೆ ಭಾಗದ ಸಂಗಮೇಶ್ವರ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥಿಸಿದರು.
ಪ್ರಮುಖರಾದ ಸುಂದರ್‌ಬಾಬು, ಪುಟ್ಟೇಗೌಡ, ವೈ. ನಟರಾಜ್, ಕೆ. ಸುದೀಪ್ ಕುಮಾರ್, ನಾಗೇಶ್, ಎಚ್.ಎಸ್ ಮಂಜು, ಶಿವಾಜಿ, ಭೈರಣ್ಣ, ರಾಜೇಶ್, ಹನುಮಂತ, ಅಜಯ್, ಕೇಶವ, ಪ್ರದೀಪ್, ಲೋಕೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಇದೆ ರೀತಿ ನ್ಯೂಟೌನ್ ಭಾಗದಲ್ಲಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳು ಮತ್ತು ಹಿರಿಯ ನಾಗರೀಕರು ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಭದ್ರಾವತಿ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೇರಳ ಸಮಾಜಂ ವತಿಯಿಂದ ವಿಶೇಷ ಪೂಜೆ:
ತಾಲೂಕು ಕೇರಳ ಸಮಾಜಂ ವತಿಯಿಂದ ನ್ಯೂಟೌನ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೇರಳ ಸಮಾಜಂ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment