ಬಸವಕುಮಾರ್
ಭದ್ರಾವತಿ: ತಾಲೂಕಿನ ಗೋಣಿಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವಕುಮಾರ್(೫೫) ಭಾನುವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಬಳಿ ವಾಸಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಏಕಾಏಕಿ ಪುನಃ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಕಳೆದ ಕೆಲವು ವರ್ಷಗಳಿಂದ ಗೋಣಿಬೀಡು ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಸರ್ಕಾರಿ ನೌಕರರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ, ದಲಿತ ಸಂಘರ್ಷ ಸಮಿತಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರ ನಿಧನಕ್ಕೆ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಸರ್ಕಾರಿ ನೌಕರರು ಸೇರಿದಂತೆ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment