ಟಿ.ಬಿ ಧನಂಜಯ
ಭದ್ರಾವತಿ, ಸೆ. ೧೯: ತಾಲೂಕಿನ ಸಿಂಗನ ಮನೆ ಗ್ರಾಮ ಜಯ ಕರ್ನಾಟಕ ಶಾಖೆ ಅಧ್ಯಕ್ಷ, ಗ್ರಾಮ ಪಂಚಾಯಿತಿ ಸದಸ್ಯ ಟಿ.ಡಿ ಶಶಿಕುಮಾರ್‌ರರ ತಂದೆ ಟಿ.ಬಿ ಧನಂಜಯ(೭೩) ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹೊಂದಿದ್ದರು. ಕರ್ನಾಟಕ ವಿದ್ಯುತ್ ನಿಗಮ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಶಂಕರಘಟ್ಟದಲ್ಲಿ ನೆರವೇರಿತು.
ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಸಿಂಗನಮನೆ ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್, ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ತ್ಯಾಗರಾಜ್, ಗ್ರಾ.ಪಂ. ಅಧ್ಯಕ್ಷೆ ಆರ್. ಉಮಾ, ದೀನ ಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ರಮೇಶ್, ಶಂಕರ್ ರೈಸ್ ಮಿಲ್ ಮಾಲೀಕ ನಂದೀಶ್‌ಕುಮಾರ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment