ಭದ್ರಾವತಿಯಲ್ಲಿ ಕೇಸರಿ ಪಡೆ ವತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ, ಮಹಾನ್ ದೇಶಭಕ್ತ ಸರ್ದಾರ್ ಭಗತ್ ಸಿಂಗ್‌ರವರ ೧೧೩ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ, ಸೆ. ೨೯: ನಗರದ ಕೇಸರಿ ಪಡೆ ವತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ, ಮಹಾನ್ ದೇಶಭಕ್ತ ಸರ್ದಾರ್ ಭಗತ್ ಸಿಂಗ್‌ರವರ ೧೧೩ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಹೊಸ ಸೇತುವೆ ರಸ್ತೆಯಲ್ಲಿರುವ ಜಿ.ಎಸ್ ಆಟೋಮೊಬೈಲ್ ಮುಂಭಾಗ ಆಯೋಜಿಸಲಾಗಿದ್ದ ೪ನೇ ವರ್ಷದ ಶಿಬಿರದಲ್ಲಿ ಸುಮಾರು ೫೫ಕ್ಕೂ ಹೆಚ್ಚು ರಕ್ತದಾನಿಗಳು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಭಗತ್‌ಸಿಂಗ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕೇಸರಿಪಡೆ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment