ಎಂ.ಜೆ ಅಪ್ಪಾಜಿ
ಭದ್ರಾವತಿ, ಸೆ. ೧೨: ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ನ್ಯೂಟೌನ್ ಚರ್ಚ್ ಮೈದಾನದಲ್ಲಿ ಸೆ.೧೩ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ, ಹೊಸದುರ್ಗ ಕನಕಪೀಠದ ಶ್ರೀ ಈಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಛಲವಾದಿ ಜಗದ್ಗುರು ಶ್ರೀ ಬಸವನಾಗಿದೇವ ಶರಣರು, ಚಿತ್ರದುರ್ಗ ಬಂಜಾರ ಪೀಠದ ಶ್ರೀ ಸರದಾರ ಸೇವಲಾಲ ಸ್ವಾಮೀಜಿ, ಹರಿಹರ ವಾಲ್ಮೀಕಿ ಗುರುಪೀಠದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಸನ್ನಾಂದ ಸ್ವಾಮೀಜಿ, ಸಿಎಸ್‌ಐ ವೇನ್ಸ್ ಮೆಮೊರಿಯಲ್ ಚರ್ಚ್ ಶಿವಮೊಗ್ಗ ವಲಯಾಧ್ಯಕ್ಷ ರೆವರೆಂಡ್ ಜಿ. ಸ್ಟ್ಯಾನ್ಲಿ ಮತ್ತು ಶಿವಮೊಗ್ಗ ದಾರುಲ್ ಇ-ಹಸನ್ ಮದರಸ ಪ್ರಿನ್ಸಿಪಲ್ ಮೌಲಾನ ಶಾಹುಲ್ ಹಮೀದ್ ಉಪಸ್ಥಿತರಿರುವರು.
ಚುನಾಯಿತ ಪ್ರತಿನಿಧಿಗಳು, ವಿವಿಧ ಸಮಾಜ ಹಾಗೂ ಸಂಘ-ಸಂಸ್ಥೆಗಳ ಹಾಗು ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.
No comments:
Post a Comment