ಬಿ.ವಿ ಗಿರೀಶ್
ಭದ್ರಾವತಿ, ಸೆ. ೨೬: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಮುಂದಾಗಿರುವ ಜನ ವಿರೋಧಿ ಹಾಗು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸೆ.೨೮ರಂದು ಹಮ್ಮಿಕೊಳ್ಳಲಾಗಿರುವ 'ಕರ್ನಾಟಕ ಬಂದ್'ಗೆ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ಬೆಂಬಲ ನೀಡಲಿದೆ ಎಂದು ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ತಿಳಿಸಿದ್ದಾರೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಇನ್ನಿತರ ತಿದ್ದುಪಡಿ ಕಾಯ್ದೆಗಳು ರೈತರು, ಬಡವರು, ಕೂಲಿ ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಲಿವೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇದಕ್ಕೆ ಪೂರಕವಾಗಿ ವೇದಿಕೆ ಸಹ ಬೆಂಬಲ ಸೂಚಿಸಲಿದೆ.
ಕಾಯ್ದೆಗಳನ್ನು ವಿರೋಧಿಸಿ ಸೆ.೨೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪನೆ ಮಾಡಿ ನಂತರ ಕಾಲ್ನಡಿಗೆ ಮೂಲಕ ತಾಲೂಕು ಕಛೇರಿ ತಲುಪಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ವಿವಿಧ ಸಂಘ-ಸಂಸ್ಥೆಗಳು, ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು, ಸಾರ್ವಜನಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಗಿರೀಶ್ ಕೋರಿದ್ದಾರೆ.
No comments:
Post a Comment