ಭದ್ರಾವತಿ ಹೊಸಮನೆ ಹನುಮಂತನಗರದಲ್ಲಿ ಓರ್ವನನ್ನು ಭೀಕರವಾಗಿ ಕೊಲೆ ಮಾಡಿರುವುದು.
ಭದ್ರಾವತಿ, ಅ. ೧: ನಗರದ ಹೊಸಮನೆ ಹನುಮಂತನಗರದಲ್ಲಿ ಓರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಶಾರುಖ್ ಖಾನ್(೨೬) ಎಂಬಾತನನ್ನು ಕೊಲೆ ಮಾಡಲಾಗಿದೆ. ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ ಈ ಭಾಗದಲ್ಲಿ ಓಸಿ, ಇಸ್ಪೀಟ್, ಗಾಂಜಾ ಸೇವನೆ ಸೇರಿದಂತೆ ಹಲವು ಕಾನೂನು ಬಾಹಿರ ಕೃತ್ಯಗಳು ನಡೆಯುತ್ತಿದ್ದು, ಕೊಲೆಯಾದ ವ್ಯಕ್ತಿ ಕೂಡ ಈ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದನು. ಅಲ್ಲದೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಆತನ ಕೊಲೆ ನಡೆದಿರುವ ಸಾಧ್ಯತೆ ಇದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.
No comments:
Post a Comment