ಭಾರತೀಯ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಶಾರದ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಜನ್ಮದಿನ ಕಾರ್ಯಕ್ರಮವನ್ನು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ಉದ್ಘಾಟಿಸಿದರು.
ಭದ್ರಾವತಿ, ಅ. ೨: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ಹಲವೆಡೆ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.
ನ್ಯೂಟೌನ್ ಶಾರದ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್ ಉದ್ಘಾಟಿಸಿದರು. ಆಡಳಿತ ಮತ್ತು ಸಿಬ್ಬಂದಿ ವಿಭಾಗದ ಪ್ರಭಾರಿ ಮಹಾಪ್ರಬಂಧಕ ಪಿ.ಪಿ ಚಕ್ರಬರ್ತಿ, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್ ವೀರಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗಮನ ಸೆಳೆದ ಕಿರು ನಾಟಕ:
ಕೊರೋನಾ ಯೋಧರಿಗೆ ಗೌರವ ನಮನ ಮತ್ತು ಸ್ವಚ್ಛ ಭಾರತ-ಸ್ವಾಸ್ಥ್ಯಾ ಭಾರತ ಕಿರು ನಾಟಕ ಹೆಚ್ಚು ಗಮನ ಸೆಳೆಯಿತು. ಕಲಾವಿದರಾದ ಬಿ.ಎಸ್. ವಸಂತ್, ಪಿ.ವಿ ರಾಘವೇಂದ್ರ, ಸೀತಾರಾಮ, ಕೆ.ಎನ್ ಮಂಜುನಾಥ್, ಭಾನುಪ್ರಕಾಶ್, ಬಿ. ಕುಶಾಲ, ಬಿ. ಸೃಜನ, ಗಿರಿಜ, ತ್ರಿವೇಣಿ ಮತ್ತು ಭಾನುಪ್ರಕಾಶ್ ಬಾಬುರವರ ಅಭಿನಯ ಮೆಚ್ಚುಗೆಗೆ ಪಾತ್ರವಾಯಿತು.
ಮಹಾತ್ಮಗಾಂಧಿ ಕುರಿತ ಪ್ರೇಕ್ಷಕರ ರಸಪ್ರಶ್ನೆ ಕಾರ್ಯಕ್ರಮವನ್ನು ಕ್ವಿಜ್ ಮಾಸ್ಟರ್‌ಗಳಾದ ನಾಗೇಶ್ ಮತ್ತು ರಾಘವೇಂದ್ರ ನಡೆಸಿಕೊಟ್ಟರು. ಹಾಡುಗಾರಿಕೆ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಆರಂಭದಲ್ಲಿ ನಾಗರಾಜ್-ಭಗವದ್ಗೀತೆ, ನೂರಾ ಮೆನೆಜಸ್-ಬೈಬಲ್ ಮತ್ತು ಹಫೀಜ್ ಉರ್ ರಹಮಾನ್-ಕುರಾನ್ ಪವಿತ್ರ ಗ್ರಂಥಗಳ ಆಯ್ದ ಸಾಲುಗಳನ್ನು ಪಠಿಸಿದರು.
ವೈದ್ಯಕೀಯ ವಿಭಾಗದ ಜಂಟಿ ನಿರ್ದೇಶಕಿ ಡಾ.ಕೆ.ಎಸ್ ಕವಿತ ನಿರೂಪಿಸಿದರು. ವಿವಿಧ ವಿಭಾಗಗಳ ಅಧಿಕಾರಿಗಳು, ಕಾರ್ಮಿಕ ಹಾಗು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ನಗರಾಡಳಿತ ಹಾಗು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಹಾಗು ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿಯವರ ೧೧೬ನೇ ಜನ್ಮದಿನ ಅಂಗವಾಗಿ ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸಾರ್ವಜನಿಕರಿಗೆ ಕೊರೋನಾ ಸೋಂಕು ಹರಡದಂತೆ ಜಾಗೃತಿ ಹಾಗು ಉಚಿತ ಮಾಸ್ಕ್ ವಿತರಿಸಲಾಯಿತು.
ಕೊರೋನಾ ಸೋಂಕು ಕುರಿತು ಜಾಗೃತಿ, ಮಾಸ್ಕ್ ವಿತರಣೆ:
ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಹಾಗು ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿಯವರ ೧೧೬ನೇ ಜನ್ಮದಿನ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.
ಕಾಲೇಜಿನ ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೆಂಜರ್ಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಲ್ಲಿ ಕೊರೋನಾ ಸೋಂಕು ಹರಡದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫಲಕಗಳನ್ನು ಪ್ರದರ್ಶಿಸಿ ಜಾಥಾ ನಡೆಸಲಾಯಿತು. ಅಲ್ಲದೆ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಲಾಯಿತು.
ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ಯುವ ರೇಡ್ ಕ್ರಾಸ್ ಸಂಚಾಲಕ ಹಾಗೂ ದೈಹಿಕ ಶಿಕ್ಷಣ ಬೋಧಕ ಎಂ.ಡಿ ವಿಶ್ವನಾಥ, ಪ್ರೊ. ಮಲ್ಲಪ್ಪ ಎಂ, ಡಾ. ಬಿ ಜಿ ಅಮೃತೇಶ್ವರ್ ಹಾಗು ಕಾಲೇಜಿನ ರೋವರ್ಸ್, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್‌ನಲ್ಲಿರುವ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಹಾಗು ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿಯವರ ೧೧೬ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು.
ವಿಐಎಸ್‌ಎಲ್ ನಿವೃತ್ತ ಕಾರ್ಮಿಕರಿಂದ ಮಹಾತ್ಮಗಾಂಧಿ ಜಯಂತಿ:
ನ್ಯೂಟೌನ್‌ನಲ್ಲಿರುವ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಹಾಗು ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿಯವರ ೧೧೬ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು.
ಹನುಮಂತರಾವ್, ನರಸಿಂಹಯ್ಯ, ಶಂಕರ್, ಕೆಂಪಯ್ಯ, ನರಸಿಂಹಚಾರ್, ಬಸವರಾಜ್, ರವೀಂದ್ರರೆಡ್ಡಿ, ನಂಜಪ್ಪ, ವೀರಭದ್ರಪ್ಪ, ಲಾಜರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ತಾಲೂಕು ಕಚೇರಿ ಸಮೀಪದಲ್ಲಿರುವ ಆಮ್ ಆದ್ಮಿ ಪಾರ್ಟಿ ವತಿಯಿಂದ ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು.
ಆಮ್ ಆದ್ಮಿ ಪಾರ್ಟಿಯಿಂದ ಗಾಂಧಿ ಜಯಂತಿ:
ನಗರದ ತಾಲೂಕು ಕಚೇರಿ ಸಮೀಪದಲ್ಲಿರುವ ಆಮ್ ಆದ್ಮಿ ಪಾರ್ಟಿ ವತಿಯಿಂದ ರಾಷ್ಟ್ರಪಿತ ಮಹಾತ್ಮಗಾಂಧಿಯವರ ೧೫೧ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು.
ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಪಕ್ಷದ ಪ್ರಮುಖರು ಮಾತನಾಡಿ, ಇತ್ತೀಚಿನ ಕೆಲವು ವರ್ಷಗಳಿಂದ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ, ಧೋರಣೆಗಳನ್ನು ಖಂಡಿಸಲಾಯಿತು. ಪ್ರಮುಖರಾದ ಪರಮೇಶ್ವರಚಾರ್, ಎಚ್. ರವಿಕುಮಾರ್, ಜಾವೇದ್, ಟಿ.ವಿ ಜೋಸೆಫ್, ವಿಲ್ಸನ್, ವಿನೋದ್, ಮುಳ್ಕೆರೆ ಲೋಕೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment