ವಿದ್ಯುತ್ ಕ್ಷೇತ್ರ ಖಾಸಗಿಕರಣ ಹಾಗು ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಭದ್ರಾವತಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಅ. ೫: ವಿದ್ಯುತ್ ಕ್ಷೇತ್ರ ಖಾಸಗಿಕರಣ ಹಾಗು ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಕೆಪಿಟಿಸಿಎಲ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಅಧಿಕಾರಿಗಳು, ನೌಕರರು ಕಪ್ಪುಪಟ್ಟಿ ಧರಿಸಿ ಖಾಸಗಿಕರಣ ಹಾಗು ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಕುಮಾರ್, ಲೆಕ್ಕಾಧಿಕಾರಿ ರಾಮಾಚಂದ್ರಪ್ಪ, ಯೂನಿಯನ್ ಕೇಂದ್ರ ಸಮಿತಿ ಸದಸ್ಯ ಹೇಮಣ್ಣ ಸೇರಿದಂತೆ ಇನ್ನಿತರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಯೂನಿಯನ್ ಅಧ್ಯಕ್ಷ ಆನಂದ್, ಪರಿಶಿಷ್ಟ ಜಾತಿ, ಪಂಗಡ ಕಲ್ಯಾಣ ಸಮಿತಿ ಅಧ್ಯಕ್ಷ ಲೋಕೇಶ್, ಅಬ್ದುಲ್ ಮುನಾಫ್, ಎಲ್ಲಾ ಕಚೇರಿಗಳ ಸಹಾಯಕ ಇಂಜಿನಿಯರ್‌ಗಳು, ಶಾಖಾಧಿಕಾರಿಗಳು, ನೌಕರರು ಪಾಲ್ಗೊಂಡಿದ್ದರು.
No comments:
Post a Comment