ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ್‌ಭಾಯಿ ಪಟೇಲರ ಹುಟ್ಟುಹಬ್ಬದ ಅಂಗವಾಗಿ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಆಡಳಿತ ಕಛೇರಿ ಸಮೀಪದ ಇಸ್ಪಾತ್ ಭವನದ ಮುಂಭಾಗ ಶನಿವಾರ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.
ಭದ್ರಾವತಿ, ಅ. ೩೧: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ್‌ಭಾಯಿ ಪಟೇಲರ ಹುಟ್ಟುಹಬ್ಬದ ಅಂಗವಾಗಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಆಡಳಿತ ಕಛೇರಿ ಸಮೀಪದ ಇಸ್ಪಾತ್ ಭವನದ ಮುಂಭಾಗ ಶನಿವಾರ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.
ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಎಂ.ವೈ. ಸುರೇಶ್ ಕನ್ನಡದಲ್ಲಿ, ಡಾ. ಸುಜೀತ್‌ಕುಮಾರ್ ಹಿಂದಿಯಲ್ಲಿ ಮತ್ತು ಡಾ. ರಾಜು ಆಂಗ್ಲ ಭಾಷೆಯಲ್ಲಿ ಪ್ರತಿಙ ವಿಧಿ ಬೋಧಿಸಿದರು. ವಿಶೇಷವಾಗಿ ಕೊರೋನಾ ಯೋಧರಿಗೆ ಗೌರವ ಸೂಚಿಸಲಾಯಿತು.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್.ಎಸ್ ರಾವ್, ಸುರಜೀತ್‌ಮಿಶ್ರ, ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಪ್ರವೀಣ್‌ಕುಮಾರ್‌ದೇವಾಂಗಮಠ ನಿರೂಪಿಸಿದರು.
No comments:
Post a Comment