ಭದ್ರಾವತಿ, ಅ. ೨: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅ.೪ರಂದು ಬೆಳಿಗ್ಗೆ ೧೦ ಗಂಟೆಗೆ ಎಸ್. ಶ್ರೀನಿವಾಸ್ ದತ್ತಿ ದಾನಿಗಳ ಸಹಕಾರದೊಂದಿಗೆ ಮನೋಜ್ ದತ್ತಿ ಕಾರ್ಯಕ್ರಮ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂಧ ಮಕ್ಕಳಿಂದ ಸುಗಮ ಸಂಗೀತ ಹಾಗು ಗಾನಗಾರುಡಿಗ ಡಾ. ಎಸ್.ಪಿ ಬಾಲಸುಬ್ರಮಣ್ಯಂರವರಿಗೆ ನುಡಿ ನಮನ ನಡೆಯಲಿದ್ದು, ಉದ್ಯಮಿ ಎನ್ ಪ್ರಕಾಶ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಸಾಪ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಆಡಳಿತಾಧಿಕಾರಿ ಶಾರದ ಶಿವಬಸಪ್ಪ, ಕಸಾಪ ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿಗಳಾದ ಚನ್ನಪ್ಪ, ವೈ.ಕೆ ಹನುಮಂತಯ್ಯ ಹಾಗು ಸಂಚಾಲಕ ಚಂದ್ರಶೇಖರಪ್ಪ ಚಕ್ರಸಾಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment