ಭದ್ರಾವತಿಯಲ್ಲಿ ಪ್ರಮುಖ ರಸ್ತೆಗಳ ಬೀದಿಬದಿ ಮೀನು ವ್ಯಾಪಾರಿಗಳನ್ನು ಶುಕ್ರವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿರುವ ಘಟನೆ ನಡೆಯಿತು.
ಭದ್ರಾವತಿ, ಅ. ೩೦: ನಗರದ ಪ್ರಮುಖ ರಸ್ತೆಗಳ ಬೀದಿಬದಿ ಮೀನು ವ್ಯಾಪಾರಿಗಳನ್ನು ಶುಕ್ರವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿರುವ ಘಟನೆ ನಡೆಯಿತು.
ಮೀನುಗಾರರ ಬೀದಿ ಬಿ.ಎಚ್ ರಸ್ತೆ ದುರ್ಗಾ ನರ್ಸಿಂಗ್ ಹೋಂ ಬಳಿ ಹಾಗು ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದಲ್ಲಿ ಪ್ರತಿ ದಿನ ಬೀದಿ ಬದಿ ಹಸಿ ಮೀನು ಮಾರಾಟ ನಡೆಸಲಾಗುತ್ತಿತ್ತು. ಇದರಿಂದ ರಸ್ತೆಯಲ್ಲಿ ಸಂಚರಿಸುವವರು, ಸಮೀಪದ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು, ಮೆಸ್ಕಾಂ ಸಿಬ್ಬಂದಿಗಳು ಹಾಗು ಸಮೀಪದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿತ್ತು. ಅಲ್ಲದೆ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಇಲ್ಲದೆ ಇರುವುದು ಕಂಡು ಬರುತ್ತಿತ್ತು.
ಈ ಹಿನ್ನಲೆಯಲ್ಲಿ ನಗರಸಭೆ ಇಂಜಿನಿಯರ್ ಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಹಾಗು ಸೂಪರ್ ವೈಸರ್ ಎನ್. ಗೋವಿಂದ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸುವಲ್ಲಿ ಯಶಸ್ವಿಯಾಯಿತು.
No comments:
Post a Comment