ಭದ್ರಾವತಿ, ಅ. ೧೫: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಕ್ಕಿಯನ್ನು ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಗುರುವಾರ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ನಗರದ ಹೊಸಮನೆ ವ್ಯಾಪ್ತಿಯ ಮೊದಲನೇ ತಿರುವಿನ ಮನೆಯೊಂದರಲ್ಲಿ ಸಂಗ್ರಹಿಸಲಾಗಿದ್ದ ಅಕ್ಕಿಯನ್ನು ಬೇರೆಡೆಗೆ ಸಾಗಿಸಲು ಲಾರಿಗೆ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಸುಮಾರು ೧.೮೦ ಲಕ್ಷ ರು. ಮೌಲ್ಯದ ಸುಮಾರು ೬೦ ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ಸ್ಥಳಕ್ಕೆ ಠಾಣಾಧಿಕಾರಿ ಜಯಣ್ಣ, ಆಹಾರ ಇಲಾಖೆ ಅಧಿಕಾರಿ ಗಾಯತ್ರಿ ಸೇರಿದಂತೆ ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment