ಭದ್ರಾವತಿ ಹುತ್ತಾ ಕಾಲೋನಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಅಲ್ಲದೆ ವಿದ್ಯುತ್ ಬೀದಿ ದೀಪಗಳ ವ್ಯವಸ್ಥೆ ಸಮರ್ಪಕವಾಗಿ ಕೈಗೊಳ್ಳದ ಕಾರಣ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಐಎಸ್‌ಎಲ್ ನಗರಾಡಳಿತಾಧಿಕಾರಿ ವಿಶ್ವನಾಥ್‌ರವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಅ. ೭: ನಗರದ ಹುತ್ತಾ ಕಾಲೋನಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಅಲ್ಲದೆ ವಿದ್ಯುತ್ ಬೀದಿ ದೀಪಗಳ ವ್ಯವಸ್ಥೆ ಸಮರ್ಪಕವಾಗಿ ಕೈಗೊಳ್ಳದ ಕಾರಣ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಐಎಸ್‌ಎಲ್ ನಗರಾಡಳಿತಾಧಿಕಾರಿ ವಿಶ್ವನಾಥ್‌ರವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ವಿಐಎಸ್‌ಎಲ್ ನಗರಾಡಳಿತಕ್ಕೆ ಸೇರಿದ ವಸತಿಗೃಹಗಳಲ್ಲಿ ಕುಡಿಯುವ ನೀರು ಬೆಳಿಗ್ಗೆ ಸುಮಾರು ೬.೩೦ ರಿಂದ ೭.೪೫ರವರೆಗೆ ಮಾತ್ರ ಬರುತ್ತಿದ್ದು, ಕೊಳವೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ನೀರು ಬರುತ್ತಿದೆ. ಇದರಿಂದಾಗಿ ಅಗತ್ಯವಿರುವಷ್ಟು ನೀರು ಲಭ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಸುಮಾರು ೨ ಗಂಟೆ ಸಮಯ ಕೊಳವೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಸಬೇಕು.
ಈ ಭಾಗದ ರಸ್ತೆಗಳಲ್ಲಿ ವಿದ್ಯುತ್ ಬೀದಿ ದೀಪಗಳ ವ್ಯವಸ್ಥೆ ಸಮರ್ಪಕವಾಗಿ ಕೈಗೊಳ್ಳದ ಕಾರಣ ರಾತ್ರಿ ವೇಳೆ ನಿವಾಸಿಗಳಿಗೆ ಹಾಗು ರಸ್ತೆಗಳಲ್ಲಿ ಸಂಚರಿಸುವವರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಿವಾಸಿಗಳು ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ನೇತೃತ್ವದಲ್ಲಿ ಮನವಿ ಸಲ್ಲಿಸಿ ಆಗ್ರಹಿಸಿದರು.
ಮನವಿ ಸ್ವೀಕರಿಸಿದ ವಿಶ್ವನಾಥ್‌ರವರು ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ಕೆಲವು ಸಮಸ್ಯೆಗಳು ಎದುರಾಗಿದ್ದು, ಆದರೂ ಸಹ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಬೀದಿ ದೀಪಗಳ ವ್ಯವಸ್ಥೆ ಸಹ ಸರಿಪಡಿಸುವುದಾಗಿ ಭರವಸೆ ನೀಡಿದರು.
ನಗರಸಭಾ ಸದಸ್ಯರಾದ ಎಂ.ಎ ಅಜಿತ್, ಗುಣಶೇಖರ್, ಸ್ಥಳೀಯ ನಿವಾಸಿಗಳಾದ ಎ.ಟಿ ರಾಜಪ್ಪ, ಹರೀಶ್, ರಾಜಣ್ಣ, ತಿಮ್ಮೇಗೌಡ, ಎಂ. ನಂಜುಂಡಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment