ಮೌನೇಶಚಾರ್
ಭದ್ರಾವತಿ, ಅ. ೩: ನಗರದ ಹೊಸಮನೆ ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಮೌನೇಶಚಾರ್(೬೨) ಶನಿವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಹೊಂದಿದ್ದರು. ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೌನೇಶಚಾರ್‌ರವರು ಸರ್ಕಾರಿ ಶಾಲೆ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರ ನಿಧನಕ್ಕೆ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಎಲ್. ದೇವರಾಜ್, ಶಿಕ್ಷಕ ವೃಂದದವರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment