ಜೆ.ಎಚ್ ಪಟೇಲ್
ಭದ್ರಾವತಿ, ಅ. ೩: ಜೆ.ಎಚ್ ಪಟೇಲ್ ಅಭಿಮಾನಿ ಬಳಗದ ವತಿಯಿಂದ ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲ್‌ರವರ ೯೦ನೇ ವರ್ಷದ ಜನ್ಮ ದಿನ ಅ. ೪ರಂದು ಬೆಳಿಗ್ಗೆ ೧೧ ಗಂಟೆಗೆ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಿರಂಜನ ದೇಶಿ ಕೇಂದ್ರ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ತ್ರಿಶೂಲ್ ಪಾಣಿ ಪಟೇಲ್ ಉಪಸ್ಥಿತರಿರುವರು. ಕಾರಿಗನೂರು ಜಿ.ಪಂ. ಸದಸ್ಯ, ರೈತ ಮುಖಂಡ ತೇಜಸ್ವಿ ವಿ. ಪಟೇಲ್ ಅಧ್ಯಕ್ಷತೆ ವಹಿಸಲಿದ್ದು, ಶಿರಸ್ತೇದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಮನೋಹರ್, ನ್ಯೂಟೌನ್ ಠಾಣಾಧಿಕಾರಿ ಮೋಹನ್‌ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ನಗರಸಭಾ ಸದಸ್ಯ ಎಂ.ಎ ಅಜಿತ್, ಕೆ.ವಿ ಶಿವರಾಮ್, ಸುಮನ್ ದಯಾಳನ್, ಕಲಾವತಿ, ದಿವ್ಯಶ್ರೀ, ಎಸ್. ಉಮೇಶ್, ರವಿ ಕಿಶನ್, ಜಮಾನುಲ್ಲಾಖಾನ್, ಸತೀಶ್‌ಪಟೇಲ್, ಗಂಗಾಧರ್, ಶಿವಕುಮಾರ್, ಕೆ. ಪ್ರಸಾದ್, ಸಿದ್ದಲಿಂಗಯ್ಯ, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಕೆ.ಎಸ್ ಸತ್ಯನಾರಾಯಣ, ನಲ್ಲೂರು ಉಸ್ಮಾನ್ ಷರೀಫ್, ಬಿ.ಎನ್ ರಾಜು ಮತ್ತು ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಹಾಗು ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್‌ಕುಮಾರ್ ಕೋರಿದ್ದಾರೆ.
No comments:
Post a Comment