ಪ್ರಗತಿಪರ ಸಂಘಟನೆಗಳಿಂದ ಸಿ.ಎಂ ಆದಿತ್ಯನಾಥ ಪ್ರತಿಕೃತಿ ದಹಿಸಿ ಆಕ್ರೋಶ
ಭದ್ರಾವತಿಯಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿರುವ ದಲಿತ ಯುವತಿ 'ಮನೀಷಾ ವಾಲ್ಮೀಕಿ' ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಪ್ರಗತಿ ಸಂಘಟನೆಗಳ ಒಕ್ಕೂಟ ಖಂಡಿಸಿದ್ದು, ಸೋಮವಾರ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಭದ್ರಾವತಿ, ಅ. ೫: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿರುವ ದಲಿತ ಯುವತಿ 'ಮನೀಷಾ ವಾಲ್ಮೀಕಿ' ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ನಗರದ ಪ್ರಗತಿ ಸಂಘಟನೆಗಳ ಒಕ್ಕೂಟ ಖಂಡಿಸಿದ್ದು, ಸೋಮವಾರ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ರವರ ಪ್ರತಿಕೃತಿ ದಹಿಸುವ ಮೂಲಕ ಸಾಮೂಹಿಕ ಅತ್ಯಾಚಾರ ಘಟನೆಗೆ ಕಾರಣರಾದವರನ್ನು ತಕ್ಷಣ ಬಂಧಿಸುವ ಜೊತೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಆರೋಪಿಗಳನ್ನು ರಕ್ಷಿಸಲು ಸಾಕ್ಷಿಗಳನ್ನು ನಾಶಮಾಡಿದ ಉತ್ತರ ಪ್ರದೇಶ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಲಾಯಿತು.
ಒಕ್ಕೂಟದ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖರಾದ ನಗರಸಭೆ ಮಾಜಿ ಬಿ.ಕೆ ಮೋಹನ್, ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಬಸವರಾಜ್ ಬಿ. ಆನೇಕೊಪ್ಪ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್ ಕರುಣಾಮೂರ್ತಿ, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಜೋಸೆಫ್, ಜಾವಿದ್, ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ಕುಬೇಂದ್ರಪ್ಪ, ಜೆಬಿಟಿ ಬಾಬು, ರಾಜೇಂದ್ರ, ಬದರಿನಾರಾಯಣ, ಚನ್ನಪ್ಪ, ಎಂ. ಶಿವಕುಮಾರ್, ಕರಿಯಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment