ಕೂಡ್ಲಿಗೆರೆ ಎಸ್. ಹಾಲೇಶ್
ಭದ್ರಾವತಿ, ಅ. ೧೬: ತಾಲೂಕಿನ ಕೂಡ್ಲಿಗೆರೆ ಗ್ರಾಮದ ನಿವಾಸಿ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೂಡ್ಲಿಗೆರೆ ಎಸ್ ಹಾಲೇಶ್‌ರವರನ್ನು ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿಯ ಅಧಿಕಾರೇತರ ನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಕೂಡ್ಲಿಗೆರೆ ಹಾಲೇಶ್‌ರವರು ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುವ ಜೊತೆಗೆ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅಲ್ಲದೆ ರೋಟರಿ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದರು. ಇದೀಗ ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿಯ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
No comments:
Post a Comment