ನಾಡಹಬ್ಬ ದಸರಾ ಆಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಪೌರಾಯುಕ್ತ ಮನೋಹರ್ ಆಮಂತ್ರಣ ನೀಡುವ ಮೂಲಕ ಆಹ್ವಾನಿಸಿದರು.
ಭದ್ರಾವತಿ, ಅ. ೧೬: ಕೊರೋನಾ ಸಂಕಷ್ಟದ ನಡುವೆಯೂ ೯ ದಿನಗಳ ನಾಡಹಬ್ಬ ದಸರಾ ಆಚರಣೆಗೆ ನಗರಸಭೆ ಆಡಳಿತ ಮುಂದಾಗಿದ್ದು, ಮಾಜಿ ಸೈನಿಕ ಸುಬೇದಾರ್ ಎಲ್.ಡಿ ಅಶೋಕ್ ಅ.೧೭ರ ಶನಿವಾರ ಚಾಲನೆ ನೀಡಲಿದ್ದಾರೆ.
ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಈ ನಡುವೆ ನಗರದ ವಿವಿಧ ದೇವಾಲಯಗಳಲ್ಲಿ ೯ ದಿನಗಳ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಬಹುತೇಕ ದೇವಾಲಯಗಳ ಸಮಿತಿಗಳು ಸರ್ಕಾರದ ಮಾರ್ಗಸೂಚಿಗಳಂತೆ ಸರಳ ಆಚರಣೆಗೆ ಮುಂದಾಗಿವೆ.
ಶಾಸಕರಿಗೆ ಆಹ್ವಾನ:
ನಾಡಹಬ್ಬ ದಸರಾ ಆಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಪೌರಾಯುಕ್ತ ಮನೋಹರ್ ಆಮಂತ್ರಣ ನೀಡುವ ಮೂಲಕ ಆಹ್ವಾನಿಸಿದರು.
ನಗರಸಭೆ ಆಡಳಿತದ ಪರವಾಗಿ ಶಾಸಕರ ನಿವಾಸಕ್ಕೆ ತೆರಳಿದ ಮನೋಹರ್ ನೇತೃತ್ವದ ತಂಡ ದಸರಾ ಆಚರಣೆ ಯಶಸ್ವಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿತು.
ಕಂದಾಯಾಧಿಕಾರಿ ರಾಜ್‌ಕುಮಾರ್, ಲೇಖಾಧಿಕಾರಿ ಸೈಯದ್ ಮಹಬೂಬ್ ಆಲಿ, ಮಂಜುನಾಥ್, ಸತ್ಯನಾರಾಯಣ, ನರಸಿಂಹಚಾರ್, ರಮಾಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment