ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಆಡಳಿತ ಕಛೇರಿ ಇಸ್ಪಾತ್ ಭವನದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಕೆ.ಎಸ್.ಎಸ್ ರಾವ್ ಸರ್.ಎಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಾಗೃತಿ ತಿಳುವಳಿಕೆ ಸಪ್ತಾಹಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಅ. ೨೮: ಪ್ರತಿಯೊಬ್ಬರು ಜಾಗರೂಕರಾಗಿ, ಪ್ರಾಮಾಣಿಕರಾಗಿ ತಮ್ಮ ಕೆಲಸ, ಸಂಸ್ಥೆ, ಸಮಾಜ ಹಾಗೂ ದೇಶದೆಡೆಗೆ ನಿಷ್ಠೆ ತೋರಬೇಕೆಂದು ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್.ಎಸ್ ರಾವ್ ಹೇಳಿದರು.
ಅವರು ಕಾರ್ಖಾನೆಯ ಆಡಳಿತ ಕಛೇರಿ ಇಸ್ಪಾತ್ ಭವನದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸರ್.ಎಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆಮಾಡುವ ಮೂಲಕ ಜಾಗೃತಿ ತಿಳುವಳಿಕೆ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು.
ಯಾರೂ ಸಹ ವಿಜಿಲೆನ್ಸ್ ವಿಭಾಗದ ಬಗ್ಗೆ ಭಯಪಡುವ ಅಗತ್ಯವಿಲ್ಲ. ಈ ವಿಭಾಗ ಮುನ್ನಚ್ಚರಿಕೆ ಕ್ರಮಗಳ ಕುರಿತು ನಮಗೆ ಮಾರ್ಗದರ್ಶನ ನೀಡುತ್ತದೆ. ನಾವು ವೆಚ್ಚ ಕಡಿಮೆಗೊಳಿಸುವ ಮೂಲಕ ನಮ್ಮ ಕೆಲಸದೆಡೆಗೆ ಪ್ರತಿಶತ ೧೦೦ರಷ್ಟು ಗುರಿ ಸಾಧಿಸುವ ಜೊತೆಗೆ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಬೇಕೆಂದರು.
ವಿಜಿಲೆನ್ಸ್ ಮತ್ತು ಎಸಿವಿಓ ವಿಭಾಗದ ಉಪ ಮಹಾಪ್ರಬಂಧಕ ಆರ್. ಜಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ಪ್ರತಿನಿತ್ಯ ಜಾಗೃತರಾಗಿ ಮುನ್ನಡೆಯುವ ಜೊತೆಗೆ ನಿಷ್ಠೆ ಮತ್ತು ಪ್ರಾಮಾಣಿಕತೆ ಪ್ರತಿಯೊಂದು ಹಂತದಲ್ಲೂ ಕಾಯ್ದಿರಿಸಿಕೊಳ್ಳಬೇಕು. ಈ ಬಾರಿ ಸಪ್ತಾಹದ ಧ್ಯೇಯ ವಾಕ್ಯ 'ಜಾಗೃತ ಭಾರತ, ಸಮೃದ್ಧ ಭಾರತ' ಎಂಬುದಾಗಿದೆ. ಮುಂಜಾಗ್ರತೆ ಕ್ರಮಗಳನ್ನು ಮತ್ತು ಇ-ಆಡಳಿತ ಸಾಧನಗಳನ್ನು ಬಳಸಿ ಸಂಸ್ಥೆಯೆಡೆಗೆ ತಮ್ಮ ನಿಷ್ಠೆಯನ್ನು ಕಾಯ್ದುಕೊಂಡು ಸಂಸ್ಥೆಯ ಜೊತೆಗೆ ದೇಶದ ಸಮೃದ್ಧಿಯನ್ನು ಹೆಚ್ಚಿಸಬೇಕೆಂದರು.
ಸ್ಥಾವರ ವಿಭಾಗದ ಮುಖ್ಯ ಮಹಾಪ್ರಬಂಧಕ ಸುರಜಿತ್ ಮಿಶ್ರಾ, ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಮಹಾಪ್ರಬಂಧಕ ಪಿ.ಪಿ. ಚಕ್ರವರ್ತಿ, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್. ವೀರಣ್ಣ, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಅಧಿಕಾರಿಗಳಾದ ಡಿ. ಲೋಕೇಶ್ವರ, ಸುರಜೀತ್ ಮಿಶ್ರಾ ಮತ್ತು ಟಿ. ರವಿಚಂದ್ರನ್ ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತಿಙ ವಿಧಿ ಬೋಧಿಸಿದರು.
ಪಿ.ಎಚ್.ಆರ್ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮಹಾಪ್ರಬಂಧಕ ಎಲ್. ಪ್ರವೀಣ್‌ಕುಮಾರ್, ಪ್ರಾಜೆಕ್ಟ್ ಮತ್ತು ಮೈನ್ಸ್ ವಿಭಾಗದ ಮಹಾಪ್ರಬಂಧಕ ಮೋಹನ್ ರಾಜ್ ಶೆಟ್ಟಿ ಮತ್ತು ವಿಐಎಸ್‌ಎಲ್ ಆಸ್ಪತ್ರೆ ಜಂಟಿ ನಿರ್ದೇಶಕ ಡಾ. ಎಂ.ವೈ ಸುರೇಶ್‌ರವರು ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ವಿಜಿಲೆನ್ಸ್ ಕಮಿಷನರ್‌ರವರ ಸಂದೇಶಗಳನ್ನು ವಾಚಿಸಿದರು.
ಕೋವಿಡ್-೧೯ ಮಾರ್ಗಸೂಚಿ ಅನುಸಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಮಾಸ್ಕ್ ಧರಿಸುವಿಕೆ ಬಗ್ಗೆ ಅರಿವು ಮೂಡಿಸುವ ಹಿನ್ನಲೆಯಲ್ಲಿ ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಗ್ರೀಟಿಂಗ್ ಕಾರ್ಡ್ ರಚಿಸುವ ಸ್ಪರ್ಧೆಯನ್ನು ಅಧಿಕಾರಿಗಳು, ಕಾಯಂ ಮತ್ತು ಗುತ್ತಿಗೆ ಕಾರ್ಮಿಕರಿಗೆ ಆಯೋಜಿಸಲಾಗಿತ್ತು. ಹೌಸ್ ಕೀಪಿಂಗ್ ಸ್ಪರ್ಧೆಯನ್ನು ೨ ವಿಭಾಗಗಳಲ್ಲಿ ಉತ್ಪಾದಕಾ ಮತ್ತು ಸೇವಾ ಇಲಾಖೆಗಳಿಗೆ ಆಯೋಜಿಸಲಾಗಿತ್ತು.
ವೈದ್ಯಕೀಯ ಮತ್ತು ಆರೋಗ್ಯ ಸೇವೆ ವಿಭಾಗದ ಜಂಟಿ ನಿರ್ದೇಶಕಿ ಡಾ|| ಎಸ್.ಕವಿತಾ ಪ್ರಾರ್ಥಿಸಿದರು. ವಿಜಿಲೆನ್ಸ್ ವಿಭಾಗದ ಹಿರಿಯ ವ್ಯವಸ್ಥಾಪಕ ವಿಕಾಸ್ ಬಸೇರ್ ನಿರೂಪಿಸಿದರು. ಟೆಕ್ನಿಷಿಯನ್‌ಕೇದಾರ್‌ನಾಥ್ ವಂದಿಸಿದರು.
No comments:
Post a Comment