ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಹಯೋಗದೊಂದಿಗೆ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆಯಾಗಿ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಭಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ನ. ೧೦: ಪ್ರತಿಯೊಬ್ಬರು ಕನ್ನಡ ನೆಲ, ಜಲ, ಭಾಷೆ ಪ್ರೀತಿಸುವ ಮನೋಭಾವ ಹೆಚ್ಚಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಮಂಗಳವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಹಯೋಗದೊಂದಿಗೆ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆಯಾಗಿ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಭಾರಂಭ ಉದ್ಘಾಟಿಸಿ ಮಾತನಾಡಿದರು.
ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದಿರುವ ನಾವುಗಳು ಭಾಷೆಯ ಮೇಲಿನ ಪ್ರೀತಿ, ಅಭಿಮಾನ ಎಂದಿಗೂ ಕಡಿಮೆ ಮಾಡಿಕೊಳ್ಳಬಾರದು. ಕನ್ನಡಪರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರಬೇಕು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ. ಪರಿಷತ್‌ನ ಎಲ್ಲಾ ಚಟುವಟಿಕೆಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.
ಕನ್ನಡದಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾಥಿಗಳನ್ನು ಗುರುತಿಸಿ ಗೌರವಿಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಕನ್ನಡದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದರು.
ಕಸಾಪ ಜಿಲ್ಲಾ ಉಪಾಧ್ಯಕ್ಷ ಎಚ್.ಎನ್ ಮಹಾರುದ್ರಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಸಾಪ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಹಯೋಗದೊಂದಿಗೆ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆಯಾಗಿ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಪೌರಾಯುಕ್ತ ಮನೋಹರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ಕಸಾಪ ಮಾಜಿ ಅಧ್ಯಕ್ಷ ಬೇಲಿಮಲ್ಲೂರು ಎಂ. ನಾಗಪ್ಪ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್, ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್ ಭಟ್, ಕಸಾಪ ತಾಲೂಕು ಉಪಾಧ್ಯಕ್ಷ ಡಾ. ಬಿ.ಎಂ ನಾಸಿರ್‌ಖಾನ್, ಕಾರ್ಯದರ್ಶಿಗಳಾದ ಸಿ. ಚನ್ನಪ್ಪ, ವೈ.ಕೆ ಹನುಮಂತಯ್ಯ, ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಎ. ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು. ಅರಳೆಹಳ್ಳಿ ಅಣ್ಣಪ್ಪ ನಿರೂಪಿಸಿದರು. ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆಯಾಗಿ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
No comments:
Post a Comment