ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಹೆಸರು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ನಾಮಕರಣಗೊಳಿಸಲು ಒತ್ತಾಯಿಸಿ ಶಾಸಕ ಬಿ ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೧೧: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಹೆಸರು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ನಾಮಕರಣಗೊಳಿಸಲು ಒತ್ತಾಯಿಸಿ ಶಾಸಕ ಬಿ ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಎಂ.ಜೆ ಅಪ್ಪಾಜಿಯವರು ೩ ಬಾರಿ ಕ್ಷೇತ್ರದ ಶಾಸಕರಾಗಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಬಸ್ ನಿಲ್ದಾಣ ನಿರ್ಮಾಣಕ್ಕೂ ಸಾಕಷ್ಟು ಶ್ರಮಿಸಿರುವುದು ತಮಗೂ ತಿಳಿದಿರುವ ವಿಚಾರವಾಗಿದೆ. ಈಗಾಗಲೇ ಅಪ್ಪಾಜಿ ಹೆಸರು ನಾಮಕರಣಗೊಳಿಸಲು ಮಾಜಿ ಶಾಸಕ ವೈಎಸ್‌ವಿ ದತ್ತ ನೇತೃತ್ವದಲ್ಲಿ ಹೋರಾಟ ನಡೆಸಿ ತಾಲೂಕು ಆಡಳಿತಕ್ಕೂ ಮನವಿ ಸಹ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾವು ಸಹ ಸರ್ಕಾರಕ್ಕೆ ಅಪ್ಪಾಜಿ ಹೆಸರು ನಾಮಕರಣಗೊಳಿಸಲು ಸರ್ಕಾರಕ್ಕೆ ಆಗ್ರಹಿಸಬೇಕೆಂದು ಸಮಿತಿ ವತಿಯಿಂದ ಒತ್ತಾಯಿಸುತ್ತೇವೆಂದು ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮನವಿಯಲ್ಲಿ ತಿಳಿಸಿದ್ದಾರೆ.
No comments:
Post a Comment