ಆರ್. ರವಿನಾಯ್ಕ
ಭದ್ರಾವತಿ, ನ. ೪: ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಘಟನಾ ಸಂಚಾಲಕರಾಗಿ ಹಳೇನಗರದ ನಿವಾಸಿ ಆರ್. ರವಿನಾಯ್ಕ ನೇಮಕಗೊಂಡಿದ್ದಾರೆ.
ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೇಮಕ ಆದೇಶ ಹೊರಡಿಸಲಾಗಿದ್ದು, ಜಿಲ್ಲಾ ಸಂಚಾಲಕ ಎ. ಅರ್ಜುನ್, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಬಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನೂತನ ತಾಲೂಕು ಸಂಘಟನಾ ಸಂಚಾಲಕರಾದ ಆರ್. ರವಿನಾಯ್ಕರವರು ಎಂ. ಗುರುಮೂರ್ತಿ ಸೇರಿದಂತೆ ಜಿಲ್ಲಾ ಹಾಗು ತಾಲೂಕು ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment