ಇತ್ತೀಚೆಗೆ ಭದ್ರಾವತಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರು, ನಗರದ ಜನ್ನಾಪುರ ನಿವಾಸಿಗಳಾದ ರಾಜೇಶ್ ಹಾಗೂ ಮನೋಜ್ ಕುಟುಂಬಗಳಿಗೆ ಸಂಸದ ಬಿ.ವೈ ರಾಘವೇಂದ್ರ ತಲಾ ೫ ಲಕ್ಷ ರು. ಪರಿಹಾರ ಧನ ವಿತರಿಸಿದರು
ಭದ್ರಾವತಿ, ನ. ೯: ಇತ್ತೀಚೆಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರು, ನಗರದ ಜನ್ನಾಪುರ ನಿವಾಸಿಗಳಾದ ರಾಜೇಶ್ ಹಾಗೂ ಮನೋಜ್ ಕುಟುಂಬಗಳಿಗೆ ಸಂಸದ ಬಿ.ವೈ ರಾಘವೇಂದ್ರ ತಲಾ ೫ ಲಕ್ಷ ರು. ಪರಿಹಾರ ಧನ ವಿತರಿಸಿದರು.
ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ರಾಕೇಶ್‌ರವರ ಸಹೋದರ ರಾಜೇಶ್ ಹಾಗೂ ೧೦ನೇ ತರಗತಿ ವಿದ್ಯಾರ್ಥಿಯಾಗಿರುವ ಮನೋಜ್ ಕುಟುಂಬಕ್ಕೆ ಚೆಕ್ ವಿತರಿಸಿದ ಸಂಸದರು ಸಾಂತ್ವನ ಹೇಳಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಿರಿಯರಾದ ಪಟ್ಟಭಿ ಜೀ , ಬಿಜೆಪಿ ಜಿಲ್ಲಾ ಪ್ರ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ , ತಾಲೂಕು ಮಂಡಲ ಮಾಜಿ ಅಧ್ಯಕ್ಷರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ತಾಲೂಕು ಪಂಚಾಯತ್ ಸದಸ್ಯ ಕೆ. ಮಂಜುನಾಥ್ ಕದಿರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
No comments:
Post a Comment