ಟಿ.ಎಸ್ ದುಗ್ಗೇಶ್
ಭದ್ರಾವತಿ, ನ. 21: ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ನಗರದ ಟವನ್ ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಟಿ.ಎಸ್ ದುಗ್ಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿ ಇಲ್ಲದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು. ದುಗ್ಗೇಶ್‌ರವರು ಹಲವಾರು ವರ್ಷಗಳಿಂದ ಟವನ್ ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಗುರುತಿಸಿಕೊಂಡಿದ್ದರು. ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್‌ಗೆ ತಾಲೂಕಿನ ಅರಕೆರೆ ಎಚ್.ಎಲ್ ಷಡಾಕ್ಷರಿ, ಗೊಂದಿ ಜಯರಾಮ್, ಎಚ್.ಎಸ್ ಸಂಜೀವಕುಮಾರ್ ಮತ್ತು ಟಿ.ಎಸ್ ದುಗ್ಗೇಶ್ ಸೇರಿದಂತೆ 4 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಯೂನಿಯನ್ ಒಟ್ಟು 14 ನಿರ್ದೇಶಕ ಸ್ಥಾನಗಳನ್ನು ಹೊಂದಿದ್ದು, ಈ ಹಿಂದೆ ತಾಲೂಕಿನ ಅರಕೆರೆ ಎಚ್.ಎಲ್ ಷಡಾಕ್ಷರಿಯವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟಿ.ಎಸ್ ದುಗ್ಗೇಶ್‌ರವರಿಗೆ ನಗರದ ಟವನ್ ಭಾವಸಾರ ಕ್ಷತ್ರಿಯ ಕೊ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment