ಶನಿವಾರ, ನವೆಂಬರ್ 7, 2020

ರು.೨೦ ಲಕ್ಷ ವೆಚ್ಚದಲ್ಲಿ ಶ್ರೀರಾಮ ಭಜನಾ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿ ಹಲವಾರು ವರ್ಷಗಳಿಂದ ಪಾಳುಬಿದ್ದಿದ್ದ ಶ್ರೀರಾಮ ಭಜನಾ ಮಂದಿರ ಕಟ್ಟಡ ನೆಲಸಮಗೊಳಿಸಿ ಇದೀಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಸುಮಾರು ರು. ೨೦ ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ನ. ೭: ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿ ಹಲವಾರು ವರ್ಷಗಳಿಂದ ಪಾಳುಬಿದ್ದಿದ್ದ ಶ್ರೀರಾಮ ಭಜನಾ ಮಂದಿರ ಕಟ್ಟಡ ನೆಲಸಮಗೊಳಿಸಿ ಇದೀಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಸುಮಾರು ರು. ೨೦ ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿ ಪೂಜೆ ನೆರವೇರಿಸಲಾಯಿತು.
      ಬಿಜೆಪಿ ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಚಂದ್ರಪ್ಪ, ಪರಮೇಶ್ವರಪ್ಪ, ರವಿಕುಮಾರ್, ಬಬ್ಬೂರು ಕಮ್ಮೆ ಸೇವಾ ಸಂಘದ ಅಧ್ಯಕ್ಷ ನಂಜುಂಡಯ್ಯ, ಶ್ರೀ ಕರುಮಾರಿಯಮ್ಮ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ, ಛಲವಾದಿ ಸಮಾಜದ ಲೋಕೇಶ್ ಸೇರಿದಂತೆ ಭಜನಾ ಮಂದಿರದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.

1 ಕಾಮೆಂಟ್‌: