ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ಭದ್ರಾವತಿ ಮಂಗೋಟೆ ರುದ್ರೇಶ್‌ರವರಿಗೆ ತಾಲೂಕು ಪದಾಧಿಕಾರಿಗಳು ಸನ್ಮಾನಿಸುವ ಮೂಲಕ ಅಭಿನಂದಿಸಿದರು.
ಭದ್ರಾವತಿ, ನ. ೯: ಭಾರತೀಯ ಜನತಾ ಪಕ್ಷದ ಯುವ ಮುಖಂಡ, ನಗರದ ನಿವಾಸಿ ಮಂಗೋಟೆ ರುದ್ರೇಶ್‌ರವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಮೂಲತಃ ನ್ಯಾಯವಾದಿಗಳಾಗಿರುವ ಮಂಗೋಟೆ ರುದ್ರೇಶ್‌ರವರು ವಿದ್ಯಾರ್ಥಿ ಪರಿಷತ್ ಹೋರಾಟಗಳಲ್ಲಿ ತೊಡಗಿಸಿಕೊಂಡು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡವರು. ಯುವ ಮೋರ್ಚಾ, ನಂತರ ತಾಲೂಕು ಮಂಡಲ ಗ್ರಾಮಾಂತರ ಅಧ್ಯಕ್ಷರಾಗಿ ಹುದ್ದೆಗಳನ್ನು ಅಲಂಕರಿಸಿದ್ದರು. ಇವರ ಪಕ್ಷ ನಿಷ್ಠೆಯನ್ನು ಗುರುತಿಸಿ ಇದೀಗ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.
ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರಿಗೆ, ಪಕ್ಷದ ಜಿಲ್ಲಾ ಹಾಗು ತಾಲೂಕು ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಮಂಗೋಟೆ ರುದ್ರೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.
ತಾಲೂಕು ಪದಾಧಿಕಾರಿಗಳಿಂದ ಅಭಿನಂದನೆ:
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ಮಂಗೋಟೆ ರುದ್ರೇಶ್‌ರವರಿಗೆ ತಾಲೂಕು ಪದಾಧಿಕಾರಿಗಳು ಸನ್ಮಾನಿಸುವ ಮೂಲಕ ಅಭಿನಂದಿಸಿದರು.
ಮುಖಂಡರಾದ ಜಿ. ಧರ್ಮಪ್ರಸಾದ್, ಜಿ. ಆನಂದಕುಮಾರ್, ಸುನಿಲ್‌ಗಾಯಕ್‌ವಾಡ್, ರೇವಣಕರ್, ಎಂ. ಮಂಜುನಾಥ್, ಬಿ.ಎಸ್ ಶ್ರೀನಾಥ್ ಆಚಾರ್, ಬಿ.ಕೆ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment