ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು, ಶೋಷತರಿಗೆ ಬಿಟ್ಟುಕೊಡದೆ ಅಡಕೆ ಚೀಲಗಳನ್ನು ಸಂಗ್ರಹಿಸಲು, ಅಡಕೆ ಒಣಗಿಸಲು ಹಾಗು ಇನ್ನಿತರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ.
ಭದ್ರಾವತಿ, ನ. ೧೨: ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು, ಶೋಷಿತರಿಗೆ ಸಹಕಾರಿಯಾಗುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂಬೇಡ್ಕರ್ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಆದರೆ ಸಮುದಾಯ ಭವನಗಳು ಸದ್ಬಳಕೆಯಾಗುವ ಬದಲು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.
ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಪರಿಶಿಷ್ಟರು, ಆರ್ಥಿಕವಾಗಿ ಹಿಂದುಳಿದವರು, ಶೋಷತರಿಗೆ ಸಮುದಾಯದ ಕುಂದು-ಕೊರತೆ ಚರ್ಚಿಸಲು, ಸಭೆ-ಸಮಾರಂಭಗಳನ್ನು ನಡೆಸಲು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಟ್ಟುಕೊಡದೆ ಅಡಕೆ ಚೀಲಗಳನ್ನು ಸಂಗ್ರಹಿಸಲು, ಅಡಕೆ ಒಣಗಿಸಲು ಹಾಗು ಇನ್ನಿತರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕೆಂದು ಪರಿಶಿಷ್ಟ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.
No comments:
Post a Comment