ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸೋಮವಾರ ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ನ. ೨: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸೋಮವಾರ ೬೫ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಖಾನೆ ಒಳಭಾಗದಲ್ಲಿರುವ ಮಹಾತ್ಮ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್, ಮುಖ್ಯ ಮಹಾಪ್ರಬಂಧಕ (ಸ್ಥಾವರ) ಸುರಜೀತ್ ಮಿಶ್ರಾ, ಮಹಾಪ್ರಬಂಧಕ ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಪಾರ್ಥ ಚರ್ಕಬರ್ತಿ, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್ ವೀರಣ್ಣ ಸೇರಿದಂತೆ ಇತರರು ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಮಂಜುಶ್ರೀ, ತ್ರಿವೇಣಿ, ಉನ್ನೀಕೃಷ್ಣನ್, ವಸಂತ್, ಶಿವಮಾದು ಹಾಗೂ ಫ್ರಾನ್ಸಿಸ್ ಸೇರಿದಂತೆ ಇನ್ನಿತರನ್ನೊಳಗೊಂಡ ತಂಡದಿಂದ ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ, ಕಲೆ, ಸಾಹಿತ್ಯ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕೃಷ್ಣ ಮತ್ತು ನಾಗೇಶ್‌ರವರಿಂದ ಕನ್ನಡ ನಾಡು-ನುಡಿ ಕುರಿತಾದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಮಂಜುಶ್ರೀ ಮತ್ತು ವಸಂತ್ ನಿರೂಪಿಸಿದರು. ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಧಿಕಾರಿಗಳು ಹಾಗು ಕಾರ್ಮಿಕ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
No comments:
Post a Comment