Wednesday, November 4, 2020

ನ.೮ರಂದು ಮೊದಲ ವಾರ್ಷಿಕೋತ್ಸವ, ನೂತನ ಮಹಿಳಾ ಸಂಘ ಉದ್ಘಾಟನೆ

ಭದ್ರಾವತಿ, ನ. ೪: ತಾಲೂಕು ಮಾಜಿ ಸೈನಿಕರ ಸಂಘದ ಮೊದಲ ವಾರ್ಷಿಕೋತ್ಸವ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನ.೮ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನ್ಯೂಟೌನ್ ಬಂಟರ ಭವನದಲ್ಲಿ ನಡೆಯಲಿದೆ.
     ದೇಶದಲ್ಲಿ ಮೊದಲ ಬಾರಿಗೆ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇದು ಮಾಜಿ ಸೈನಿಕರ ಹೆಮ್ಮೆಯ ವಿಚಾರವಾಗಿದೆ. ಸಮಾರಂಭದ ಅಂಗವಾಗಿ ರಕ್ತ ಗುಂಪು ತಪಾಸಣೆ ಹಾಗು ರಕ್ತದಾನ ಶಿಬಿರ ಸಹ ಆಯೋಜಿಸಲಾಗಿದೆ. ಮಾಜಿ ಸೈನಿಕರು, ಕುಟುಂಬ ವರ್ಗದವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಂಘದ ಕಾರ್ಯದರ್ಶಿ ವಿನೋದ್ ಪೂಜಾರಿ ಕೋರಿದ್ದಾರೆ.

No comments:

Post a Comment