ಗುಣವತಿ
ಭದ್ರಾವತಿ, ನ. ೨೪: ಬೆಂಗಳೂರಿನ ಕರ್ನಾಟಕ ರಾಜ್ಯ ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ನಗರದ ಹುತ್ತಾ ಕಾಲೋನಿ ನಿವಾಸಿ ಗುಣವತಿಯವರಿಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಗುಣವತಿಯವರು ಕೆ.ಪಿ ಪೂರ್ಣಚಂದ್ರ ತೇಜಸ್ವಿ ಹಾಗು ನಾಗೇಶ್ ಹೆಗಡೆಯವರ ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆಯ ಸ್ವರೂಪ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದೆ. ಇವರು ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ, ಕನ್ನಡಪರ ಹೋರಾಟಗಾರ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಶಿವಮಾಧುರವರ ಪುತ್ರಿಯಾಗಿದ್ದಾರೆ.
No comments:
Post a Comment