ಭದ್ರಾವತಿ, ನ. ೧೪: ಭಾರತೀಯ ಸೈನ್ಯಕ್ಕೆ ಸೇರಲು ಇಚ್ಛಿಸುವ ಯುವಕರಿಗೆ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಉಚಿತ ತರಬೇತಿ ನೀಡಲಾಗುತ್ತಿದ್ದು, ಲಾಕ್‌ಡೌನ್ ಹಿನ್ನಲೆಯಲ್ಲಿ ಸುಮಾರು ೬ ತಿಂಗಳ ಹಿಂದೆ ಸ್ಥಗಿತಗೊಂಡಿದ್ದ ತರಬೇತಿ ಇದೀಗ ನ.೧೬ರಿಂದ ಪುನಃ ಆರಂಭಗೊಳ್ಳಲಿದೆ.
ಭಾರತೀಯ ಸೈನ್ಯಕ್ಕೆ ಸೇರಲು ಸೈನಿಕ ಇಲಾಖೆ ಆಹ್ವಾನಿಸಿದ ಸಂದರ್ಭದಲ್ಲಿ ಸುಮಾರು ೩ ರಿಂದ ೬ ತಿಂಗಳವರೆಗೆ ಪ್ರತಿ ಬಾರಿ ತರಬೇತಿ ನೀಡಲಾಗುತ್ತಿದೆ. ಈ ಬಾರಿ ಜನವರಿ ಆರಂಭದಲ್ಲಿ ಪ್ರಾರಂಭಿಸಲಾಗಿದ್ದ ತರಬೇತಿ ಕೋವಿಡ್-೧೯ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದ ಪರಿಣಾಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಪುನಃ ತರಬೇತಿ ಆರಂಭಗೊಳ್ಳಲಿದ್ದು, ತಾಲೂಕಿನ ಯುವಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಅಶೋಕ್ ಕೋರಿದ್ದಾರೆ. ತರಬೇತಿ ಸಂದರ್ಭದಲ್ಲಿ ಉಪಹಾರದ ವ್ಯವಸ್ಥೆಯನ್ನು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಕೈಗೊಂಡಿದ್ದಾರೆ.
No comments:
Post a Comment