ಎನ್ ಉಮೇಶ್
ಭದ್ರಾವತಿ, ನ. ೨೬: ಭಾರತ ಸರ್ಕಾರದಿಂದ ಸಾಮಾಜಿಕ ಸೇವಾ ಟ್ರಸ್ಟ್‌ಗಳ ಕಾಯಿದೆಯಡಿ ನೋಂದಾಯಿಸಲ್ಪಟ್ಟಿರುವ ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ಕಾರ್ಮಿಕ ಘಟಕದ ತಾಲ್ಲೂಕು ಉಪ ನಿರ್ದೇಶಕರಾಗಿ ಸುರಗಿತೋಪಿನ ಎನ್. ಉಮೇಶ್ ನೇಮಕಗೊಂಡಿದ್ದಾರೆ.
ಮಂಡಳಿಯ ಅಧ್ಯಕ್ಷರ ಆದೇಶದ ಮೇರೆಗೆ ಪ್ರಧಾನ ಕಾರ್ಯದರ್ಶಿಗಳು ನೇಮಕಾತಿಗೆ ಆದೇಶ ಹೊರಡಿಸಿದ್ದಾರೆಂದು ರಾಷ್ಟ್ರೀಯ ಹೆಚ್ಚುವರಿ ಮುಖ್ಯ ನಿರ್ದೇಶಕ ಆರ್. ಸ್ಕಂದ ಶರತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಮೇಶ್‌ರವರು ನಗರದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಹಲವಾರು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.
No comments:
Post a Comment