ಭದ್ರಾವತಿಯಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವೇಶ್ವರಯ್ಯ ಖಾಸಗಿ ಬಸ್ ಏಜೆಂಟರ್ ಮತ್ತು ಕಾರ್ಮಿಕರ ಸಂಘದ ನೂತನ ಕಛೇರಿಯನ್ನು ಸಮಾಜ ಸೇವೆಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಉದ್ಘಾಟಿಸಿದರು.
ಭದ್ರಾವತಿ, ನ. ೧೪: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವೇಶ್ವರಯ್ಯ ಖಾಸಗಿ ಬಸ್ ಏಜೆಂಟರ್ ಮತ್ತು ಕಾರ್ಮಿಕರ ಸಂಘದ ನೂತನ ಕಛೇರಿಯನ್ನು ಸಮಾಜ ಸೇವೆಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಉದ್ಘಾಟಿಸಿದರು.
ಕಛೇರಿ ನಿರ್ಮಾಣಕ್ಕೆ ಹೆಚ್ಚಿನ ನೆರವು ನೀಡುವ ಮೂಲಕ ಸಹಕರಿಸಿದ ಉಮೇಶ್‌ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಂಘದ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಪೌರಾಯುಕ್ತ ಮನೋಹರ್, ಸಂಘದ ಅಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ಧರ್ಮರಾಜ್, ಸತೀಶ್‌ಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಬಿ.ಕೆ ಶ್ರೀನಾಥ್, ಚನ್ನೇಶ್, ವಿಜಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment