ಭದ್ರಾವತಿಯಲ್ಲಿ ಬುಧವಾರ ನ್ಯಾಯಾಲಯದ ಆವರಣದಲ್ಲಿ ತಾಲೂಕು ವಕೀಲರ ಸಂಘ ವತಿಯಿಂದ ಕನ್ನಡರಾಜ್ಯೋತ್ಸವ ನಡೆಯಿತು.
ಭದ್ರಾವತಿ, ನ. ೧೧: ಕನ್ನಡ ರಾಜ್ಯೋತ್ಸವ ಎಂಬುದು ಕೇವಲ ಸಾಂಕೆತಿಕ ಆಚರಣೆಯಾಗಬಾರದು. ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡದ ಬಳಕೆ ಹೆಚ್ಚಾಗಬೇಕೆಂದು ೪ನೇ ಹೆಚ್ಚುವರಿ ಜಿಲ್ಲಾ ಸತ್ರನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಹೇಳಿದರು.
ಅವರು ಬುಧವಾರ ನ್ಯಾಯಾಲಯದ ಆವರಣದಲ್ಲಿ ತಾಲೂಕು ವಕೀಲರ ಸಂಘದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವಕೀಲರು ನ್ಯಾಯಾಲಯದಲ್ಲಿ ಹೆಚ್ಚು ಕನ್ನಡ ಬಳಸುವ ಮೂಲಕ ಕನ್ನಡ ಬಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಸಹಜವಾಗಿ ಕನ್ನಡ ಬಳಸುವ ಮನಸ್ಥಿತಿ ಹೆಚ್ಚಾಗಬೇಕು. ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಂಡಲ್ಲಿ ಕನ್ನಡ ಸಹಜವಾಗಿ ಅಭಿವೃದ್ಧಿ ಹೊಂದುತ್ತದೆ ಎಂದರು.
ಹಿರಿಯ ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪ್ರಭಾಕರ್ ಮಾತನಾಡಿ, ಇಂದಿನ ದಿನಗಳಲ್ಲಿ ಬಹುತೇಕರು ಕನ್ನಡಿಗರು ಕನ್ನಡನಾಡಿನ ಪರಂಪರೆ, ಇತಿಹಾಸದ ಬಗ್ಗೆ ತಿಳಿದು ಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳದಿರುವುದು ನಿಜಕ್ಕೂ ವಿಷಾದನೀಯ ಬೆಳವಣಿಗೆಯಾಗಿದೆ. ಕನ್ನಡ ನಾಡಿಗಾಗಿ ಶ್ರಮಿಸಿದ ಮಹನೀಯರ ಹೋರಾಟ, ಆದರ್ಶತನಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದರು.
ಜೆಎಂಎಫ್‌ಸಿ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶ ಮೋಹನ ಗೌಡ ಮಾತನಾಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ವೈ.ಜಯರಾಂ ವಂದಿಸಿದರು. ಕಾರ್ಯದರ್ಶಿ ಟಿ.ಎಸ್ ರಾಜುನಿರೂಪಿಸಿದರು.
ನ್ಯಾಯಾಧೀಶರಾದ ಉಜ್ವಲ ವೀರಣ್ಣ, ಪುರುಷೋತ್ತಮ್, ಚಂದ್ರಶೇಖರ ಬಣಕಾರ್, ಸ್ನೇಹ ಹಾಗೂ ಹಿರಿಯ ವಕೀಲರಾದ ಉಮಾಪತಿ, ಮಂಜಪ್ಪ, ನಾರಾಯಣರಾವ್, ವಾಗಿಶ್, ರೂಪರಾವ್, ವಿದ್ಯಾಬೇಕಲ್, ವಿಮಲ, ಶೋಭ, ಆಶಾ, ವಿನಾಯಕ್, ಪಂಡರಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment