ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಳಿ ಭದ್ರಾ ನದಿಯಲ್ಲಿ ಶುಕ್ರವಾರ ಬೆಳಗ್ಗೆ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ.
ಭದ್ರಾವತಿ, ನ. ೨೦ : ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಳಿ ಭದ್ರಾ ನದಿಯಲ್ಲಿ ಶುಕ್ರವಾರ ಬೆಳಗ್ಗೆ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ.
ಸುಮಾರು ೧೦ ರಿಂದ ೧೨ ಅಡಿಯಷ್ಟು ಉದ್ದವಿರುವ ಬೃಹತ್ ಗಾತ್ರದ ಮೊಸಳೆ ಕಂಡು ಬಂದಿದ್ದು, ಸೇತುವೆ ಮೇಲೆ ಸಂಚರಿಸುತ್ತಿದ್ದ ಪಾದಚಾರಿಗಳು, ವಾಹನ ಸವಾರರು ಕೆಲ ಕ್ಷಣ ಮೊಸಳೆಯನ್ನು ಕುತೂಹಲದಿಂದ ವೀಕ್ಷಿಸಿದರು.
ಈ ಭಾಗದಲ್ಲಿ ಮೊಸಳೆಗಳು ಹೆಚ್ಚಾಗಿದ್ದು ಆಗಾಗ ಕಂಡು ಬರುತ್ತಿವೆ. ಈ ಹಿಂದೆ ಮೊಸಳೆಗಳು ನದಿ ದಡದಲ್ಲಿ ತಿರುಗಾಡುವವರು, ಸ್ನಾನ ಮಾಡಲು, ಪಾತ್ರೆ ತೊಳೆಯಲು, ಬಟ್ಟೆ ಒಗೆಯಲು ಬರುವವರ ಮೇಲೆ ಹಾಗು ಜಾನುವಾರುಗಳ ಮೇಲೆ ದಾಳಿ ನಡೆದಿರುವ ಘಟನೆಗಳು ನಡೆದಿವೆ. ನಗರಸಭೆ ಆಡಳಿತ ನದಿಗೆ ಯಾವುದೇ ರೀತಿಯ ತ್ಯಾಜ್ಯ ಸುರಿಯದಂತೆ ಎಚ್ಚರಿಕೆ ನೀಡಿದ್ದರೂ ಸಹ ಈ ಭಾಗದಲ್ಲಿ ರಾತ್ರಿ ವೇಳೆ ಕಣ್ತಪ್ಪಿಸಿ ಮಾಂಸದಂಗಡಿಗಳ ತ್ಯಾಜ್ಯ ತಂದು ಸುರಿಯಲಾಗುತ್ತಿದೆ.
ಮುಂದಿನ ದಿನಗಳ ಮೊಸಳೆಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮೊಸಳೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಅಗತ್ಯವಿದೆ.
No comments:
Post a Comment