ನ.೧ರಿಂದ ನೂತನ ಯೋಜನೆ ಜಾರಿಗೆ : ಎಲ್. ಪ್ರವೀಣ್‌ಕುಮಾರ್
ಭದ್ರಾವತಿ, ನ. ೧೦: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಉಕ್ಕು ಪ್ರಾಧಿಕಾರ ತನ್ನ ಅಧೀನಕ್ಕೆ ಒಳಪಟ್ಟ ಕಂಪನಿಗಳ ಕಾಯಂ ಅಧಿಕಾರಿಗಳು ಹಾಗು ಕಾರ್ಮಿಕರಿಗೆ ನ.೧ರಿಂದ ನೂತನವಾಗಿ 'ಕೆಲಸದ ಅವಧಿ ಕಡಿಮೆಗೊಳಿಸುವ ಯೋಜನೆ' ಜಾರಿಗೆ ತಂದಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ತಿಳಿಸಿದ್ದಾರೆ.
ವೃತ್ತಿ ಜೀವನ ಸರಿದೂಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ ಅಧಿಕಾರಿಗಳು ಹಾಗು ಕಾರ್ಮಿಕರು ವಾರದಲ್ಲಿ ಕೇವಲ ೩ ದಿನಗಳು ಮಾತ್ರ ಕರ್ತವ್ಯ ನಿರ್ವಹಿಸಬಹುದಾಗಿದೆ. ಉಳಿದ ದಿನಗಳನ್ನು ರಜಾ ದಿನಗಳೆಂದು ಪರಿಗಣನೆ ತೆಗೆದುಕೊಳ್ಳುವುದಿಲ್ಲ. ಇದರಿಂದ ಅಧಿಕಾರಿಗಳ ಹಾಗು ಕಾರ್ಮಿಕರ ಎಚ್‌ಆರ್‌ಎ, ಆರೋಗ್ಯ ಯೋಜನೆ ಸೌಲಭ್ಯಗಳು ಸೇರಿದಂತೆ ಇನ್ನಿತರ ಮೂಲ ಸೌಲಭ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಯೋಜನೆ ಕುರಿತು ಪ್ರಾಧಿಕಾರದ ಅಧ್ಯಕ್ಷ ಅನಿಲ್‌ಕುಮಾರ್ ಚೌಧರಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಯೋಜನೆಯಿಂದ ಅಧಿಕಾರಿಗಳಿಗೆ, ಕಾರ್ಮಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ಪ್ರವೀಣ್‌ಕುಮಾರ್ ಮಾಹಿತಿ ನೀಡಿದ್ದಾರೆ.
No comments:
Post a Comment