ಜನತಾದಳ(ಸಂಯುಕ್ತ) ವತಿಯಿಂದ ನ.೩೦ರಂದು ಸರ್ಕಾರಕ್ಕೆ ಮನವಿ
ಶಶಿಕುಮಾರ್ ಎಸ್. ಗೌಡ ಬಾಬುದೀಪಕ್ ಕುಮಾರ್
ಭದ್ರಾವತಿ, ನ. ೨೮: ರಾಜ್ಯದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗು ಸುಮಾರು ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿದ್ದು, ಇವುಗಳಿಗೂ ನಿಗಮ ಮಂಡಳಿ ರಚನೆ ಮಾಡಬೇಕೆಂದು ಆಗ್ರಹಿಸಿ ನ.೩೦ರಂದು ಬೆಳಿಗ್ಗೆ ೧೧ ಗಂಟೆಗೆ ಜನತಾದಳ(ಸಂಯುಕ್ತ) ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಹಾಗು ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್‌ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಮಹಾನಗರ ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ, ಪಿಟೀಲು ವಿದ್ವಾಂಸರಾದ ಚೌಡಯ್ಯ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳು ರಾಜಕೀಯ, ಸಾಹಿತ್ಯ, ಕಲೆ, ಶೈಕ್ಷಣಿಕ, ರಂಗಭೂಮಿ, ಚಲನಚಿತ್ರ, ಕೃಷಿ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರೂ ಸಹ ಶೇ.೭೫ರಷ್ಟು ಒಕ್ಕಲಿಗರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಹಿನ್ನಲೆಯಲ್ಲಿ ನಿಗಮ ರಚನೆ ಮಾಡುವುದು ಸೂಕ್ತವಾಗಿದೆ. ಇದೆ ರೀತಿ ರಾಜ್ಯದಲ್ಲಿ ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿದ್ದು, ಈ ಸಮುದಾಯಗಳಿಗೂ ನಿಗಮ ಮಂಡಳಿ ರಚನೆ ಮಾಡಬೇಕಾಗಿದೆ. ಎಲ್ಲಾ ಸಮಾಜದವರು ಹಂತ ಹಂತವಾಗಿ ಅಭಿವೃದ್ಧಿ ಹೊಂದಬೇಕೆಂಬುದು ಪಕ್ಷದ ಆಶಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದು, ಎಲ್ಲಾ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಕ್ಷಾತೀತವಾಗಿ ಪಾಲ್ಗೊಳ್ಳುವ ಮೂಲಕ ಸಹಕರಿಸುವಂತೆ ಕೋರಿದ್ದಾರೆ.
No comments:
Post a Comment