ಆರ್. ಮುಕುಂದಯ್ಯ
ಭದ್ರಾವತಿ, ನ. ೧೦: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನಿವೃತ್ತ ಕಾರ್ಮಿಕ ಆರ್. ಮುಕುಂದಯ್ಯ(೬೮) ನಿಧನ ಹೊಂದಿದರು.
ಮೃತರು ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಮಂಗಳವಾರ ನಗರದ ಬೈಪಾಸ್ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆರ್. ಮುಕುಂದಯ್ಯ ವಿಐಎಸ್‌ಎಲ್ ಕಾರ್ಮಿಕ ಸಂಘದ ಖಜಾಂಚಿಯಾಗಿ, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿಯಾಗಿ ಹಾಗು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರ ನಿಧನಕ್ಕೆ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್‌ನ ಛೇರ‍್ಮನ್ ಆರ್. ವೇಣುಗೋಪಾಲ್, ಪ್ರಮುಖರಾದ ಗ್ಸೇವಿಯರ್, ಭವಾನಿ ಶಂಕರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment