ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್
ಭದ್ರಾವತಿ, ನ. ೧೧: ನೂತನ ತಾಲೂಕು ದಂಡಾಧಿಕಾರಿಯಾಗಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ದಾವಣಗೆರೆ ತಾಲೂಕು ದಂಡಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ನಂತರ ಬೆಂಗಳೂರು ನಗರ ಚುನಾವಣಾ ಶಾಖೆ ತಹಸೀಲ್ದಾರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ತಾಲೂಕು ದಂಡಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಿ. ಸಂತೋಷ್ ಕುಮಾರ್ ಮೂಲತಃ ಕಂದಾಯ ಇಲಾಖೆಯಲ್ಲಿ ಗ್ರೇಡ್-೧ ಅಧಿಕಾರಿಯಾಗಿ ಹುದ್ದೆಗೆ ಸೇರ್ಪಡೆಗೊಂಡು ಮುಂಬಡ್ತಿ ಹೊಂದಿ ೫ ವರ್ಷಗಳಿಂದ ತಹಸೀಲ್ದಾರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಾಲೂಕು ಕಛೇರಿ ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅನುಭವ ಹೊಂದಿದ್ದಾರೆ.
ಈ ಹಿಂದೆ ವಿಧಾನಸಭೆ ಆಡಳಿತ ವಿಭಾಗದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಚ್.ಸಿ ಶಿವಕುಮಾರ್‌ರವರನ್ನು ನಿಯೋಜನೆ ಮೇರೆಗೆ ತಾಲೂಕು ದಂಡಾಧಿಕಾರಿಯಾಗಿ ನೇಮಕಗೊಳಿಸಲಾಗಿತ್ತು. ಲೈಂಗಿಕ ಕಿರುಕುಳ ಪ್ರಕರಣವೊಂದರಲ್ಲಿ ಇವರ ವಿರುದ್ಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಹುದ್ದೆಯಿಂದ ಬಿಡುಗಡೆಗೊಳಿಸಿದ್ದರು. ತೆರೆವಾದ ಹುದ್ದೆಗೆ ಶಿವಮೊಗ್ಗ ತಹಸೀಲ್ದಾರ್ ಎನ್.ಜೆ ನಾಗರಾಜ್‌ರವರಿಗೆ ಪ್ರಭಾರ ಅಧಿಕಾರ ವಹಿಸಲಾಗಿತ್ತು.
No comments:
Post a Comment