ತಹಸೀಲ್ದಾರ್‌ರವರ ಆದೇಶದ ಮೇರೆಗೆ ಭೂದಾಖಲೆಗಳ ಸಹಾಯಕ ನಿರ್ದೇಶಕರ ತಂಡ ಹಾಗು ನಗರಸಭೆ ಪೌರಾಯುಕ್ತ ಮನೋಹರ್ ನೇತೃತ್ವದ ತಂಡ ಮೊದಲ ಹಂತವಾಗಿ ಸೋಮವಾರ ಭದ್ರಾವತಿ ಹಳೇಸೀಗೇಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಿದವು.
ಭದ್ರಾವತಿ, ನ. ೩೦: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸುವ ಮೂಲಕ ಅಭಿವೃದ್ಧಿಪಡಿಸಿ ಬೇಸಿಗೆಯಲ್ಲಿ ರೈತರಿಗೆ, ಜಾನುವಾರುಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು. ಅಲ್ಲದೆ ಕೆಲವು ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಪರಿವರ್ತಿಸುವಂತೆ ಆಗ್ರಹಿಸಿ ಕಳೆದ ಸುಮಾರು ೧ ವರ್ಷದಿಂದ ನಗರದ ಜನ್ನಾಪುರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಹೋರಾಟಕ್ಕೆ ತಾಲೂಕು ಆಡಳಿತ ಮತ್ತು ನಗರಸಭೆ ಆಡಳಿತ ಪೂರಕವಾಗಿ ಸ್ಪಂದಿಸಿವೆ.
ತಹಸೀಲ್ದಾರ್‌ರವರ ಆದೇಶದ ಮೇರೆಗೆ ಭೂದಾಖಲೆಗಳ ಸಹಾಯಕ ನಿರ್ದೇಶಕರ ತಂಡ ಹಾಗು ನಗರಸಭೆ ಪೌರಾಯುಕ್ತ ಮನೋಹರ್ ನೇತೃತ್ವದ ತಂಡ ಮೊದಲ ಹಂತವಾಗಿ ಸೋಮವಾರ ಹಳೇಸೀಗೇಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಅಳತೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಿದವು.
ಕೆರೆ ವಿಶಾಲವಾಗಿದ್ದು, ಕೆರೆಯಲ್ಲಿ ಆಳೆತ್ತರ ಹೂಳು ತುಂಬಿಕೊಂಡು ಗಿಡಗಂಟಿಗಳು ಬೆಳೆದು ನಿಂತಿವೆ. ಕೆರೆಯ ಸುತ್ತಲು ತೆಂಗು ಹಾಗು ಅಡಕೆ ತೋಟಗಳಿದ್ದು, ಕೆರೆಯನ್ನು ಅಭಿವೃದ್ಧಿಪಡಿಸಿದ್ದಲ್ಲಿ ರೈತರಿಗೆ ಹಾಗು ಜಾನುವಾರುಗಳಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯ ರೈತರು ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಪೌರಾಯುಕ್ತ ಮನೋಹರ್‌ಗೆ ಮನವರಿಕೆ ಮಾಡಿಕೊಟ್ಟರು. ಅಳತೆ ಹಾಗು ಬೌಂಡರಿ ನಿಗದಿ ಕಾರ್ಯಕ್ಕೆ ಯಾವುದೇ ರೀತಿ ಅಡಚಣೆಯಾಗದಂತೆ ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಪದಾಧಿಕಾರಿಗಳಾದ ರಮಾ ವೆಂಕಟೇಶ್, ಶೈಲಜಾ ರಾಮಕೃಷ್ಣ, ಭವಾನಿ ಶಂಕರ್, ಗ್ಸೇವಿಯರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment