ಭದ್ರಾವತಿ ನಗರಸಭೆ ೩೨ನೇ ವಾರ್ಡ್ ವ್ಯಾಪ್ತಿಯ ವೇಲೂರ್ ಶೆಡ್, ಫಿಲ್ಟರ್ ಶೆಡ್ ಮತ್ತು ಕುರುಬರ ಬೀದಿಯಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೭: ನಗರಸಭೆ ೩೨ನೇ ವಾರ್ಡ್ ವ್ಯಾಪ್ತಿಯ ವೇಲೂರ್ ಶೆಡ್, ಫಿಲ್ಟರ್ ಶೆಡ್ ಮತ್ತು ಕುರುಬರ ಬೀದಿಯಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ ನಗರಸಭೆ ಪೌರಾಯುಕ್ತರಿ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
ಈ ಭಾಗದಲ್ಲಿ ಮೂಲ ಸೌಲಭ್ಯಗಳು ಸಮರ್ಪಕವಾಗಿ ಇಲ್ಲದ ಕಾರಣ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ಖುದ್ದಾಗಿ ಪರಿಶೀಲನೆ ನಡೆಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕರ್ನಾಟಕ ಜನ್ಯ ಸೈನ್ಯ ಜಿಲ್ಲಾ ಗೌರವಾಧ್ಯಕ್ಷ ಅನಿಲ್, ಅಧ್ಯಕ್ಷ ಕೆ. ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮನವಿ ಸ್ವೀಕರಿಸಿದ ಪೌರಾಯುಕ್ತರು ನ.೯ರ ಸೋಮವಾರ ಖುದ್ದಾಗಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
No comments:
Post a Comment