ಭದ್ರಾವತಿ ಬೈಪಾಸ್ ರಸ್ತೆಯಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಗುರುವಾರ ವಿಶೇಷವಾಗಿ ಸಂವಿಧಾನ ದಿನ ಆಚರಿಸಲಾಯಿತು.
ಭದ್ರಾವತಿ, ನ. ೨೬: ನಗರದ ರಂಗಪ್ಪ ವೃತ್ತ, ಅಗ್ನಿಶಾಮಕ ಠಾಣೆ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ವಿವಿಧೆಡೆ ಗುರುವಾರ ಸಂವಿಧಾನ ದಿನ ಆಚರಿಸಲಾಯಿತು.
ಅಗ್ನಿಶಾಮಕ ಠಾಣೆಯಲ್ಲಿ ಸಂವಿಧಾನ ದಿನ ಆಚರಣೆ :
ನಗರದ ಬೈಪಾಸ್ ರಸ್ತೆಯಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ವಿಶೇಷವಾಗಿ ಸಂವಿಧಾನ ದಿನ ಆಚರಿಸಲಾಯಿತು. ಮಕ್ಕಳಿಗೆ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಮತ್ತು ಸಂಸತ್ ಅಣುಕು ಪ್ರದರ್ಶನ ಏರ್ಪಡಿಸಲಾಗಿತ್ತು. ಅಲ್ಲದೆ ಅಗ್ನಿ ಅವಗಡಗಳ ಕುರಿತು ಜಾಗೃತಿ ಮೂಡಿಸಲಾಯಿತು. ಠಾಣಾಧಿಕಾರಿ ವಸಂತ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕೊರೋನಾ ಸಂಕಷ್ಟದ ಸಮಯದಲ್ಲಿ ಹಮ್ಮಿಕೊಳ್ಳಲಾಗಿರುವ ವಿಶೇಷ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಭದ್ರಾವತಿ ರಂಗಪ್ಪ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಎಸ್‌ಸಿ ಮೋರ್ಚಾ ವತಿಯಿಂದ ಸಂವಿಧಾನ ದಿನ ಆಚರಿಸಲಾಯಿತು.
ಬಿಜೆಪಿ ಎಸ್‌ಸಿ ಮೋರ್ಚಾದಿಂದ ಸಂವಿಧಾನ ದಿನ ಆಚರಣೆ:
ರಂಗಪ್ಪ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಎಸ್‌ಸಿ ಮೋರ್ಚಾ ವತಿಯಿಂದ ಸಂವಿಧಾನ ದಿನ ಆಚರಿಸಲಾಯಿತು. ಕಾರ್ಯಕ್ರಮ ಆರಂಭಕ್ಕೂ ಮೊದಲು ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಇರುವ ಭಾರತರತ್ನ, ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್‌ರವರ ಪ್ರತಿಮೆ ಮಾಲಾರ್ಪಣೆ ಮಾಡಲಾಯಿತು.
ಎಸ್‌ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಕಾರ್ಯದರ್ಶಿ ಚನ್ನೇಶ್, ಮುಖಂಡರಾದ ವಿ. ಕದಿರೇಶ್, ಕೂಡ್ಲಿಗೆರೆ ಹಾಲೇಶ್, ಬಿ.ಕೆ ಶ್ರೀನಾಥ್, ರಾಮನಾಥ ಬರ್ಗೆ, ಕುಪ್ಪಸ್ವಾಮಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು.
ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಣೆ:
ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಣೆ ಪ್ರಯುಕ್ತ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಮಾತನಾಡಿ, ಭಾರತೀಯ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಹಾಗು ಬಲಿಷ್ಠ ಸಂವಿಧಾನವಾಗಿದೆ. ಎಲ್ಲರೂ ಸಂವಿಧಾನವನ್ನು ಗೌರವಿಸುವ ಮೂಲಕ ಅದರಂತೆ ಮುನ್ನಡೆಬೇಕೆಂದರು.
ಉಪನ್ಯಾಸಕರಾದ ಡಾ. ಬಿ.ಜಿ ಅಮೃತೇಶ್ವರ, ಎನ್‌ಯುಆರ್ ಹೆಗಡೆ, ಡಾ. ಬಸವರಾಜ್, ಮಲ್ಲಪ್ಪ, ಉಮೇಶ್, ರೇವಣ್ಣಸಿದ್ದಪ್ಪ, ಡಾ. ಜಿ.ಆರ್ ರಾಜಶೇಖರ್, ಮನೋಹರ್ ಹಾಗು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
No comments:
Post a Comment