ಭದ್ರಾವತಿಯಲ್ಲಿ ಸೋಮವಾರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಹಾಗು ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಗುಲಾಬಿ ನೀಡುವ ಮೂಲಕ ಆರೋಗ್ಯ ಅರಿವು ಮೂಡಿಸುವ ಗುಲಾಬಿ ಅಂದೋಲನ ನಡೆಯಿತು.
ಭದ್ರಾವತಿ, ನ. ೩೦: ದೇಶದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ಜಾಗೃತಿಗಾಗಿ ನಡೆಸಿದ ಹಲವು ವಿಭಿನ್ನ ಬಗೆಯ ಕಾರ್ಯಕ್ರಮಗಳು ಇಂದಿಗೂ ನೆನಪಿನಲ್ಲಿ ಉಳಿದುಕೊಂಡಿವೆ. ಸಂಚಾರಿ ಪೊಲೀಸರು ಅನಗತ್ಯವಾಗಿ ಮನೆಯಿಂದ ಹೊರಬರುವ ಹಾಗು ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಗುಲಾಬಿ ನೀಡುವುದು, ಸಿಹಿ ಹಂಚುವುದು ಇತ್ಯಾದಿ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ನಡೆಸಿ ಗಮನ ಸೆಳೆದಿತ್ತು. ಇದೀಗ ಇದೆ ಮಾದರಿ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.
ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಹಾಗು ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಗುಲಾಬಿ ನೀಡುವ ಮೂಲಕ ಆರೋಗ್ಯ ಅರಿವು ಮೂಡಿಸುವ ಗುಲಾಬಿ ಅಂದೋಲನಕ್ಕೆ ಸೋಮವಾರ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಚಾಲನೆ ನೀಡಲಾಯಿತು.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಳೇಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಹಿರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್ ಹಾಗು ತಂಬಾಕು ನಿಯಂತ್ರಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
No comments:
Post a Comment