ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ತಾಲುಕು ಮೇದಾರ ಸಮಾಜದ ವತಿಯಿಂದ ಶ್ರೀ ಮೇದಾರ ಕೇತಯ್ಯನವರ ೮೯೦ನೇ ಜಯಂತಿ ಆಚರಿಸಲಾಯಿತು.
ಭದ್ರಾವತಿ, ಡಿ. ೧: ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ತಾಲುಕು ಮೇದಾರ ಸಮಾಜದ ವತಿಯಿಂದ ಶ್ರೀ ಮೇದಾರ ಕೇತಯ್ಯನವರ ೮೯೦ನೇ ಜಯಂತಿ ಆಚರಿಸಲಾಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಸಮಾಜದ ವತಿಯಿಂದ ಶ್ರೀ ಮೇದಾರ ಕೇತಯ್ಯನವರ ಜನ್ಮದಿನ ಆಚರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಜನ್ಮದಿನ ಆಚರಿಸುವಂತಾಗಬೇಕೆಂಬುದು ಸಮಾಜ ಬಾಂಧವರ ಆಶಯವಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖಂಡರು ತಿಳಿಸಿದರು.
ಕಾರ್ಯಕ್ರಮವನ್ನು ಯುವ ಮುಖಂಡ ಬಿ.ಎಸ್ ಗಣೇಶ್ ಉದ್ಘಾಟಿಸಿದರು. ನಗರಸಭೆ ಪೌರಾಯುಕ್ತ ಮನೋಹರ್, ಪ್ರಮುಖರಾದ ಕೂಡ್ಲಿಗೆರೆ ಎಸ್ ಮಹಾದೇವ, ಆರ್. ನಾಗರಾಜ್, ವಿಶ್ವನಾಥ್, ಮೈಲಾರಪ್ಪ, ಮಂಜುನಾಥ್ ಸೇರಿದಂತೆ ಇನ್ನಿತರ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ಮೇದಾರ ಕೇತಯ್ಯನವರ ೮೯೦ನೇ ಜಯಂತಿ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
No comments:
Post a Comment