Tuesday, December 8, 2020

ಗ್ರಾಮ ಪಂಚಾಯಿತಿ ಚುನಾವಣೆ : ಜೆಡಿಎಸ್ ಪಕ್ಷದ ಮೇಲ್ವಿಚಾರಕರಾಗಿ ಶಾರದ ಪೂರ‍್ಯಾನಾಯ್ಕ

ಮಾಜಿ ಶಾಸಕಿ ಶಾರದ ಪೂರ‍್ಯಾನಾಯ್ಕ

ಭದ್ರಾವತಿ, ಡಿ. ೮: ತಾಲ್ಲೂಕಿನಲ್ಲಿ ಡಿ.೨೨ ರಂದು ಮೊದಲ ಹಂತದಲ್ಲಿ ೩೫ ಗ್ರಾಮ ಪಂಚಾಯಿತಿಗಳಿಗೆ ನಡೆಯುತ್ತಿರುವ ಚುನಾವಣೆಗೆ ಜಾತ್ಯತೀತ ಜನತಾದಳ ಮೇಲ್ವಿಚಾರಕರಾಗಿ ಮಾಜಿ ಶಾಸಕಿ ಶಾರದಾ ಪೂರ‍್ಯಾನಾಯ್ಕ್ ರವರನ್ನು ನೇಮಕಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. 
     ಮಾಜಿ ಶಾಸಕ ಎಂ ಜೆ ಅಪ್ಪಾಜಿ ನಿಧನ ಹೊಂದಿದ ನಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂ.ಜೆ ಅಪ್ಪಾಜಿ ಹೆಚ್ಚಿನ ಹಿಡಿತ ಹೊಂದಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಎರಡರಲ್ಲೂ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಕ್ಷೇತ್ರದಲ್ಲಿ ಇದುವರೆಗೂ ಅಪ್ಪಾಜಿಗೆ ಪರ್ಯಾಯ ನಾಯಕನನ್ನು ಹುಡುಕಲು ಸಾಧ್ಯವಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಶಾರದಾ ಪೂರ‍್ಯಾನಾಯ್ಕ್ ರವರಿಗೆ ಜವಾಬ್ದಾರಿ ನೀಡಲಾಗಿದೆ. ಇವರು ಶಿವಮೊಗ್ಗ ಗ್ರಾಮಾಂತರದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ತಕ್ಷಣ ತಾಲೂಕು ಪಂಚಾಯಿತಿ ಚುನಾವಣೆ ಸಹ ಎದುರಾಗಿದೆ.



No comments:

Post a Comment