ಭದ್ರಾವತಿಯಲ್ಲಿ ಮಂಗಳವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಮತದಾನದಲ್ಲಿ ಅಭ್ಯರ್ಥಿಗಳು ಸಾಲುಗಟ್ಟಿ ನಿಂತು ಮತಯಾಚಿಸಿದರು.
ಭದ್ರಾವತಿ, ಡಿ. ೧೫: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಮತದಾನ ಮಂಗಳವಾರ ಹಳೇನಗರದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಯಾವುದೇ ಚುನಾವಣೆಗೂ ಕಡಿಮೆಯಿಲ್ಲದಂತೆ ಶಿಕ್ಷಕರು ಸಹ ಮತಯಾಚನೆ ಕಾರ್ಯದಲ್ಲಿ ತೊಡಗಿದ್ದರು.
ಬೆಳಿಗ್ಗೆ ೮.೩೦ರಿಂದ ಆರಂಭಗೊಂಡ ಮತದಾನ ಸಂಜೆ ೪ ಗಂಟೆಗೆ ಮುಕ್ತಾಯಗೊಂಡಿತು. ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಶಿಕ್ಷಕರು ಮತದಾನದಲ್ಲಿ ಭಾಗವಹಿಸಿದ್ದರು. ಸಿ.ಎಸ್ ಷಡಾಕ್ಷರಿ ಸಮಾನ ಮನಸ್ಕರ ಶಿಕ್ಷಕರ ಬಳಗ (ಸ್ಪಂದನ ತಂಡ) ಹಾಗು ಸಿ.ಎಸ್ ಷಡಾಕ್ಷರಿ ಅಭಿಮಾನಿ ಸಮಸ್ತ ಶಿಕ್ಷಕರ ಬಳಗ ಈ ಎರಡು ಬಣಗಳ ಶಿಕ್ಷಕರು ಮತಗಟ್ಟೆ ಮುಂಭಾಗದ ರಸ್ತೆಯಲ್ಲಿ ಎರಡು ಕಡೆ ಸಾಲುಗಟ್ಟಿನಿಂತು ಮತಯಾಚಿಸುವ ಮೂಲಕ ಗಮನ ಸೆಳೆದಿದರು. ಕೋವಿಡ್-೧೯ರ ಹಿನ್ನಲೆಯಲ್ಲಿ ಮತಗಟ್ಟೆಗೆ ಮತದಾನ ಮಾಡಲು ಬರುವವರ ಥರ್ಮೋ ಸ್ಕ್ಯಾನಿಂಗ್ ನಡೆಸಲಾಯಿತು ಅಲ್ಲದೆ ಮಾಸ್ಕ್ ಬಳಕೆ ಕಡ್ಡಾಯಗೊಳಿಸಲಾಗಿತ್ತು.
No comments:
Post a Comment