Tuesday, December 8, 2020

ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ : ಗ್ರಾ. ಪಂ. ಚುನಾವಣೆ ನಂತರ ಕ್ರಮ ಕೈಗೊಳ್ಳುವ ಭರವಸೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಮದ್ಯದಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಜನ ಸೈನ್ಯ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
   ಭದ್ರಾವತಿ, ಡಿ. ೮: ನಗರಸಭೆ ವ್ಯಾಪ್ತಿಯ ಜನ್ನಾಪುರ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಮದ್ಯದಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಜನ ಸೈನ್ಯ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
    ಈ ಮದ್ಯದಂಗಡಿಯಿಂದ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ, ಮಹಿಳೆಯರಿಗೆ, ದೇವಸ್ಥಾನಕ್ಕೆ ಬರುವ ಭಕ್ತಾಧಿಗಳಿಗೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಸಮೀಪದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಈ ಸಂಬಂಧ ತಾಲೂಕು ಆಡಳಿತ, ಅಬಕಾರಿ ಮತ್ತು ಪೊಲೀಸ್ ಇಲಾಖೆ ಮತ್ತು ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸುವ ಮೂಲಕ ತಕ್ಷಣ ಮದ್ಯದಂಗಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಯಿತು.
     ಸ್ಥಳಕ್ಕೆ ಆಗಮಿಸಿದ ಅಬಕಾರಿ ನಿರೀಕ್ಷಕ ಸುನಿಲ್ ಕಲ್ಲೂರು ಪ್ರತಿಭಟನಾಕಾರರ ದೂರುಗಳನ್ನು ಆಲಿಸಿ ಮದ್ಯದಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ವರದಿಸಲ್ಲಿಸುವುದಾಗಿ ಭರವಸೆ ನೀಡಿದರು. ಆದರೆ ಪ್ರತಿಭಟನಾಕಾರರು ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಗಿಪಟ್ಟು ಹಿಡಿದರು. ಕೊನೆಯಲ್ಲಿ ತಹಸೀಲ್ದಾರ್‌ರವರನ್ನು ಪ್ರತಿಭಟನಾಕಾರರು ಮೊಬೈಲ್ ಮೂಲಕ ಸಂಪರ್ಕಿಸಿದ್ದು, ಗ್ರಾ.ಪಂ. ಚುನಾವಣೆ ಮುಕ್ತಾಯಗೊಂಡ ನಂತರ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    ನಗರಸಭೆ ಸದಸ್ಯ ಎಂ.ಎ ಅಜಿತ್ ನೇತೃತ್ವ ವಹಿಸಿದ್ದರು. ಕರ್ನಾಟಕ ಜನ ಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಅನಂತರಾಮು, ಅನಿಲ್, ಸಂತೋಷ್, ಶ್ರೀನಿವಾಸ್, ಪರಮೇಶ್, ದೀಪು, ದೀಕ್ಷಿತ್, ಪ್ರಶಾಂತ್, ಹರೀಶ್, ಜನ ಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾರದಮ್ಮ, ಅನುರಾಧ, ವಿನೂತ, ಸ್ವಾತಿ, ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಅನಿತಾ, ಶಾರದ, ಮಹೇಶ್ವರಿ, ಪದ್ಮಮ್ಮ, ಸುಮಿತ್ರಾ, ಹೇಮಾ, ಸೌಮ್ಯ, ಶಾರದಕುಮಾರಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ನಗರಸಭಾ ಸದಸ್ಯರಾದ ಬದರಿನಾರಾಯಣ, ಗುಣಶೇಖರ್, ಮಾಜಿ ಸದಸ್ಯ ಮೈಲಾರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment