Monday, December 7, 2020

ಭಾರತ್ ಬಂದ್‌ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ

ಸೋಮವಾರ ಸಂಜೆ ಭದ್ರಾವತಿ ಮಿಲಿಟರಿ ಕ್ಯಾಂಪ್ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಭೆ ಅಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ನೇತೃತ್ವದಲ್ಲಿ ನಡೆಯಿತು.
    ಭದ್ರಾವತಿ, ಡಿ. ೭: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರೆ ನೀಡಲಾಗಿರುವ ಭಾರತ್ ಬಂದ್‌ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
    ಸೋಮವಾರ ಸಂಜೆ ಮಿಲಿಟರಿ ಕ್ಯಾಂಪ್ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷ ಹಿರಿಯ ಕಾರ್ಮಿಕ ಮುಖಂಡ ಡಿ ಸಿ ಮಾಯಣ್ಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭದ್ರಾವತಿಯಲ್ಲೂ ಸಂಪೂರ್ಣ ಬಂದ್ ನಡೆಸುವ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಬೆಳಿಗ್ಗೆ ೧೦ ಗಂಟೆಗೆ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ, ನಂತರ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.
    ಸಭೆಯಲ್ಲಿ ರೈತ ಮುಖಂಡರಾದ ಎಚ್ ಆರ್ ಬಸವರಾಜಪ್ಪ, ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ರಾಮಚಂದ್ರ, ಡಿ ವಿ ವೀರೇಶ್, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ಪೇಪರ್ ಸುರೇಶ್, ಎಎಪಿ ಪಕ್ಷದ ಎಚ್ ರವಿಕುಮಾರ್, ಇಬ್ರಾಹಿಂ ಖಾನ್, ಭಾಸ್ಕರ್,  ಕರವೇ ಅಧ್ಯಕ್ಷ ಎಂ ಪರಮೇಶ್, ರಾಜೇಂದ್ರ, ಜನಶಕ್ತಿ ಜಿ ರಾಜು, ಪೀರ್ ಶರೀಫ್, ಬಸವರಾಜ ಬಿ ಆನೇಕೊಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment